alex Certify
ಕನ್ನಡ ದುನಿಯಾ       Mobile App
       

Kannada Duniya

ಮದ್ಯದ ಅಮಲಿನಲ್ಲಿ ನಡುರಸ್ತೆಯಲ್ಲೇ ಯುವತಿಯರ ರಂಪಾಟ

ಪುಣೆ: ಯುವತಿಯರಿಬ್ಬರು ಬಾರ್ ನಲ್ಲಿ ಕಂಠಪೂರ್ತಿ ಕುಡಿದು, ಸಾರ್ವಜನಿಕರು ಹಾಗೂ ಪೊಲೀಸರನ್ನು ನಿಂದಿಸಿ ಜೈಲುಪಾಲಾದ ಘಟನೆ ಪುಣೆಯಲ್ಲಿ ನಡೆದಿದೆ.

ಪುಣೆಯ ಚಿಂದ್ವಾಡ ಪೊಲೀಸ್ ಠಾಣೆಯ ವ್ಯಾಪ್ತಿಯ ಬಾರ್ನಲ್ಲಿ ಮಿತಿಮೀರಿ ಕುಡಿದ ಸ್ಮಿತಾ ಭಾವಿಸ್ಕರ್, ಪ್ರಿಯಾ ಪಾಟೀಲ್ ಎಂಬುವರು ಬೆಳಗಿನ ಜಾವ 1 ಗಂಟೆಗೆ ಕ್ಯಾಬ್ಗಾಗಿ ರಸ್ತೆಯಲ್ಲಿ ಕಾದಿದ್ದಾರೆ. ಈ ವೇಳೆ ಒಬ್ಬಾಕೆ ನಿಯಂತ್ರಣ ಕಳೆದುಕೊಂಡು ಅಲ್ಲಿದ್ದ ಸಾರ್ವಜನಿಕರನ್ನು ನಿಂದಿಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಸ್ಥಳೀಯರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ.

ಮಹಿಳಾ ಸಿಬ್ಬಂದಿಯೊಂದಿಗೆ ಆಗಮಿಸಿದ ಚಿಂದ್ವಾಡ ಪೊಲೀಸರು ಅವರಿಬ್ಬರನ್ನು ಸುಮ್ಮನಾಗಿಸಿ ಮನೆಗೆ ಕಳಿಸುವ ಪ್ರಯತ್ನ ನಡೆಸಿದ್ದಾರೆ. ಆದರೆ ಪೊಲೀಸರನ್ನು ಬಹಿರಂಗವಾಗಿ ನಿಂದಿಸಿದ್ದಲ್ಲದೇ ಅವಾಚ್ಯ ಶಬ್ದ ಪ್ರಯೋಗ ಮಾಡಿದ್ದಾರೆ. ಈ ಕಾರಣಕ್ಕೆ ಅವರನ್ನು ಠಾಣೆಗೆ ಕರೆದೊಯ್ದರೂ ಅಲ್ಲಿ ಸಹ ಪೊಲೀಸರ ವಿರುದ್ಧವೇ ಹರಿಹಾಯ್ದಿದ್ದಾರೆ. ಈ ಕಾರಣಕ್ಕೆ ಪೊಲೀಸರು ಆ ಇಬ್ಬರು ಮತ್ತಿನಲ್ಲಿದ್ದ ಮಹಿಳೆಯರ ಮೇಲೆ ಭಾರತೀಯ ದಂಡ ಸಂಹಿತೆ 353 ರಂತೆ ಪ್ರಕರಣ ದಾಖಲಿಸಿದ್ದಾರೆ.

ಸರ್ಕಾರಿ ಅಧಿಕಾರಿಗೆ ಕರ್ತವ್ಯ ನಿರ್ವಹಿಸಲು ಅಡ್ಡಿಪಡಿಸಿದ್ದಾರೆಂಬ ಆರೋಪ ಹೊರಿಸಿ ಪ್ರಕರಣ ದಾಖಲಿಸಲಾಗಿದ್ದು, ಆ ಇಬ್ಬರನ್ನು ಯರವಾಡ ಜೈಲಿಗೆ ಕಳುಹಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...