alex Certify
ಕನ್ನಡ ದುನಿಯಾ       Mobile App
       

Kannada Duniya

ಅರುಂಧತಿ ರಾಯ್ ವಿರುದ್ಧ ವಿವಾದಾತ್ಮಕ ಟ್ವೀಟ್ ಮಾಡಿದ ನಟ

paresh-rawal-story_647_052217090805

ಬಿಜೆಪಿ ಸಂಸದ ಹಾಗೂ ಬಾಲಿವುಡ್ ಹಿರಿಯ ನಟ ಪರೇಶ್ ರಾವಲ್ ವಿವಾದಾತ್ಮಕ ಟ್ವೀಟ್ ಮಾಡಿದ್ದಾರೆ. ‘ಜಮ್ಮು-ಕಾಶ್ಮೀರದಲ್ಲಿ ಕಲ್ಲು ತೂರಾಟ ನಡೆಸುವ ಪುಂಡರನ್ನು ಸೇನಾ ಜೀಪ್ ಗೆ ಕಟ್ಟಿ ಮೆರವಣಿಗೆ ಮಾಡುವ ಬದಲು ಅರುಂಧತಿ ರಾಯ್ ಅವರನ್ನು ಜೀಪ್ ಗೆ ಕಟ್ಟಿ ಹಾಕಿ’ ಅಂತಾ ಟ್ವೀಟ್ ಮಾಡಿದ್ದಾರೆ.

ಪರೇಶ್ ರಾವಲ್ ಟ್ವೀಟ್ ಗೆ ರಿಟ್ವೀಟ್ ಗಳ ಸುರಿಮಳೆಯಾಗ್ತಿದೆ. ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಅರುಂಧತಿ ರಾಯ್ ಪರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಕಳೆದ ತಿಂಗಳು ಜಮ್ಮು-ಕಾಶ್ಮೀರದಲ್ಲಿ ಯೋಧರತ್ತ ಕಲ್ಲು ಬೀಸಿದ್ದ ಪುಂಡನೊಬ್ಬನನ್ನು ಹಿಡಿದು ಆರ್ಮಿ ಜೀಪ್ ಗೆ ಕಟ್ಟಿ ಹಾಕಲಾಗಿತ್ತು. ಆ ವಿಡಿಯೋ ಇಂಟರ್ನೆಟ್ ನಲ್ಲಿ ವೈರಲ್ ಆಗಿತ್ತು.

ಅದಕ್ಕೆ ಸಂಬಂಧಪಟ್ಟಂತೆ ಪರೇಶ್ ರಾವಲ್ ಟ್ವೀಟ್ ಮಾಡಿದ್ದಾರೆ. ಲೇಖಕಿ ಅರುಂಧತಿ ರಾಯ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಪರೇಶ್ ರಾವಲ್ ಟ್ವೀಟ್ ಗೆ ಟ್ವಿಟ್ಟರ್ ನಲ್ಲಿ ಹಲವರು ಸಹಮತ ವ್ಯಕ್ತಪಡಿಸಿದ್ದಾರೆ. 2014ರ ಲೋಕಸಭಾ ಚುನಾವಣೆಯಲ್ಲಿ ಪರೇಶ್ ರಾವಲ್ ಅಹಮದಾಬಾದ್ ಪೂರ್ವ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...