alex Certify
ಕನ್ನಡ ದುನಿಯಾ       Mobile App
       

Kannada Duniya

ಕಾರ್ತಿ ಚಿದಂಬರಂಗೆ ಬಿಗ್ ಶಾಕ್ ..!

ನವದೆಹಲಿ: ಕೇಂದ್ರದ ಹಣಕಾಸು ಖಾತೆ ಮಾಜಿ ಸಚಿವ ಪಿ. ಚಿದಂಬರಂ ಪುತ್ರ, ಉದ್ಯಮಿ ಕಾರ್ತಿ ಚಿದಂಬರಂ ಅವರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ(ಇ.ಡಿ.) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಐ.ಎನ್.ಎಕ್ಸ್. ಮೀಡಿಯಾ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚೆನ್ನೈ ಮತ್ತು ದೆಹಲಿಯಲ್ಲಿನ ನಿವಾಸಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಕಾರ್ತಿ ಚಿದಂಬರಂ ಆಪ್ತರ ನಿವಾಸಗಳ ಮೇಲೆಯೂ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಗುರುವಾರ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರಿಗೆ ಹೊಸ ಸಮನ್ಸ್ ಜಾರಿ ಮಾಡಿದ್ದ ಇ.ಡಿ. ಅಧಿಕಾರಿಗಳು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು. ತನಿಖೆಯ ಭಾಗವಾಗಿ ವಿವಿಧ ಕಡೆಗಳಲ್ಲಿ ಇಂದು ದಾಳಿ ನಡೆಸಲಾಗಿದೆ.

ದಾಳಿಯ ಸಂದರ್ಭದಲ್ಲಿ ಕಾರ್ತಿ ಚಿದಂಬರಂ ಮನೆಯಲ್ಲಿ ಇರಲಿಲ್ಲ. ಪರಿಶೀಲನೆ ಕಾರ್ಯ ಮುಂದುವರೆದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಗುಜರಾತ್ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ...?

    View Results

    Loading ... Loading ...