alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್! IPS ಅಧಿಕಾರಿಯನ್ನೇ ಥಳಿಸಿದ ಸಹೋದ್ಯೋಗಿಗಳು

ಉತ್ತರ ಪ್ರದೇಶದ ಬಾಂದಾ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಮರಳು ಸಾಗಿಸುತ್ತಿದ್ದ ಟ್ರಕ್ ಗಳಿಂದ ಹಣ ವಸೂಲಿ ಮಾಡುತ್ತಿದ್ದವರನ್ನು ರೆಡ್ ಹ್ಯಾಂಡಾಗಿ ಹಿಡಿದ ಐಪಿಎಸ್ ಅಧಿಕಾರಿಯನ್ನೇ ಈ ಅಕ್ರಮದಲ್ಲಿ ಶಾಮೀಲಾದ ಪೊಲೀಸರು ಥಳಿಸಿದ್ದಾರೆ.

ಶನಿವಾರದಂದು ಬಾಂದಾ ಜಿಲ್ಲೆಯ ಗಿರ್ವಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮರಳು ಸಾಗಾಟ ಮಾಡುವ ಟ್ರಕ್ ಗಳಿಂದ ಅಕ್ರಮವಾಗಿ ಹಣ ಸಾಗಾಟ ಮಾಡಲಾಗುತ್ತಿದೆ ಎಂದು ತಮಗೆ ಬಂದ ದೂರುಗಳ ಹಿನ್ನಲೆಯಲ್ಲಿ ಹಿರಿಯ ಐಪಿಎಸ್ ಅಧಿಕಾರಿಗಳಾದ ಹಿಮಾಂಶು ಕುಮಾರ್ ಹಾಗೂ ಮೋಹಿತ್ ಗುಪ್ತಾ ಸ್ಥಳಕ್ಕೆ ಭೇಟಿ ನೀಡಿದ್ದರು.

ಈ ವೇಳೆ ಹಣ ವಸೂಲಿ ಮಾಡುತ್ತಿದ್ದುದು ಕಂಡು ಬಂದಿದ್ದು, ಇದನ್ನು ಪ್ರಶ್ನಿಸಿದ್ದಾರೆ. ಆಗ ಅಕ್ರಮದಲ್ಲಿ ತೊಡಗಿದ್ದ ಗಿರ್ವಾ ಪೊಲೀಸ್ ಠಾಣೆಯ ಸ್ಟೇಷನ್ ಇನ್ ಚಾರ್ಚ್ ವಿವೇಕ್ ಪ್ರತಾಪ್ ಸಿಂಗ್ ಹಾಗೂ ಪೇದೆ, ಹಿರಿಯ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ್ದು, ಹಿಮಾಂಶು ಕುಮಾರ್ ಗಾಯಗೊಂಡಿದ್ದಾರೆ. ಇದೀಗ ಆರೋಪಿ ಪೊಲೀಸರನ್ನು ಅಮಾನತು ಮಾಡಲಾಗಿದ್ದು ಅವರುಗಳ ವಿರುದ್ದ ಕೇಸು ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಶಾಲಿನಿ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...