alex Certify
ಕನ್ನಡ ದುನಿಯಾ       Mobile App
       

Kannada Duniya

ಗುಡ್ ನ್ಯೂಸ್: ನಷ್ಟಕ್ಕೊಳಗಾದವರಿಗೆ ತಕ್ಷಣವೇ ಸಿಗಲಿದೆ ವಿಮೆ ಪರಿಹಾರ

ಕಳೆದ ಕೆಲ ದಿನಗಳಿಂದ ಸುರಿದ ಭಾರೀ ಮಳೆಗೆ ದೇವರ ನಾಡು ಕೇರಳ ಹಾಗೂ ಕರ್ನಾಟಕದ ಕೊಡಗು ಜಿಲ್ಲೆ ತತ್ತರಿಸಿ ಹೋಗಿದೆ. ಪ್ರವಾಹದ ಕಾರಣಕ್ಕೆ ಇಲ್ಲಿನ ಜನತೆ ಕಟ್ಟಿಕೊಂಡಿದ್ದ ಬದುಕು ಕೊಚ್ಚಿ ಹೋಗಿದೆ.

ನೆರೆ ಸಂತ್ರಸ್ತರ ನೆರವಿಗೆ ದೇಶವಾಸಿಗಳಲ್ಲದೆ ವಿದೇಶಗಳಿಂದಲೂ ಸ್ಪಂದನೆ ವ್ಯಕ್ತವಾಗುತ್ತಿದ್ದು, ಇದರ ಮಧ್ಯೆ ವಿಮೆ ಕುರಿತಂತೆ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ ಮಹತ್ವದ ಆದೇಶ ಹೊರಡಿಸಿದೆ.

ಪ್ರವಾಹಕ್ಕೆ ತುತ್ತಾಗಿರುವ ಜಿಲ್ಲೆಗಳಲ್ಲಿ ವಿಮೆ ಪರಿಹಾರಕ್ಕೆ ಅರ್ಹರಿರುವವರಿಗೆ ತಕ್ಷಣವೇ ಪರಿಹಾರದ ಮೊತ್ತವನ್ನು ಪಾವತಿಸುವಂತೆ ವಿಮಾ ಕಂಪನಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಇದನ್ನು ಸಮರ್ಪಕವಾಗಿ ಕಾರ್ಯಗತಗೊಳಿಸಲು ಹಿರಿಯ ಅಧಿಕಾರಿಯೊಬ್ಬರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸುವಂತೆ ನಿರ್ದೇಶನ ನೀಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...