alex Certify
ಕನ್ನಡ ದುನಿಯಾ       Mobile App
       

Kannada Duniya

ಜಿಎಸ್ ಟಿಗಾಗಿ ಮಧ್ಯರಾತ್ರಿ ನಡೆಯಲಿದೆ ಸಂಸತ್ ಅಧಿವೇಶನ

ಜುಲೈ ಒಂದರಿಂmodi-3ದ ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ) ಜಾರಿಗೆ ಬರಲಿದೆ. ಇದಕ್ಕಾಗಿ ಕೇಂದ್ರ ಸರ್ಕಾರ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ತಾ ಇದೆ. ಮೂಲಗಳ ಪ್ರಕಾರ ಜೂನ್ 30ರಂದು ಮಧ್ಯರಾತ್ರಿ ಕೇಂದ್ರ ಸರ್ಕಾರ ವಿಶೇಷ ಅಧಿವೇಶನ ಕರೆದಿದೆ.

ಮಾಹಿತಿ ಪ್ರಕಾರ, ಜಿಎಸ್ ಟಿ ಜಾರಿಯಾಗುವ ಐತಿಹಾಸಿಕ ಸಂದರ್ಭದ ಹಿನ್ನೆಲೆಯಲ್ಲಿ ಜೂನ್ 30ರ ರಾತ್ರಿ 11 ಗಂಟೆಗೆ ಸಂಸತ್ ವಿಶೇಷ ಅಧಿವೇಶನ ಕರೆಯಲಾಗಿದೆ. ರಾತ್ರಿ 11 ಗಂಟೆಯಿಂದ ರಾತ್ರಿ 12.10ರವರೆಗೆ ಅಧಿವೇಶನ ನಡೆಯಲಿದೆ. ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಹಣಕಾಸು ಸಚಿವ ಅರುಣ್ ಜೇಟ್ಲಿ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಸಂಸತ್ ಭವನದ ಸೆಂಟ್ರಲ್ ಹಾಲ್ ನಲ್ಲಿ ಅಧಿವೇಶನ ನಡೆಯಲಿದೆ. ಎರಡೂ ಸದನದ ಸದಸ್ಯರು ಇದ್ರಲ್ಲಿ ಪಾಲ್ಗೊಳ್ಳಲಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...