alex Certify
ಕನ್ನಡ ದುನಿಯಾ       Mobile App
       

Kannada Duniya

ಆಮ್ ಆದ್ಮಿ ಪಕ್ಷಕ್ಕೆ ಆದಾಯ ತೆರಿಗೆ ಇಲಾಖೆಯಿಂದ ಬಿಗ್ ಶಾಕ್

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ ಆದಾಯ ತೆರಿಗೆ ಇಲಾಖೆ ನೋಟಿಸ್ ನೀಡಿದೆ. 30.6 ಕೋಟಿ ರೂಪಾಯಿ ತೆರಿಗೆ ಪಾವತಿಸುವಂತೆ ಸೂಚಿಸಿದೆ.

ಎಎಪಿ 13 ಕೋಟಿ ಮೌಲ್ಯದ ಆಸ್ತಿ ವಿವರವನ್ನು ಬಹಿರಂಗಪಡಿಸಿಲ್ಲ. ಜೊತೆಗೆ 6 ಕೋಟಿ ಹಣವನ್ನು ದೇಣಿಗೆಯಾಗಿ ನೀಡಿರುವ 462 ಜನರ ವಿವರವನ್ನು ಕೂಡ ನೀಡಿಲ್ಲ ಎಂದು ಆದಾಯ ತೆರಿಗೆ ಇಲಾಖೆ ಆಕ್ಷೇಪ ವ್ಯಕ್ತಪಡಿಸಿದೆ. 2014-15 ಮತ್ತು 2015-16ರಲ್ಲಿ ಎಎಪಿ ತೆರಿಗೆ ಕಟ್ಟಲೇಬೇಕಾದ 68.44 ಕೋಟಿ ರೂಪಾಯಿ ಆದಾಯ ಹೊಂದಿತ್ತು.

ತೆರಿಗೆ ಬಾಕಿ ಬಗ್ಗೆ ಪ್ರತಿಕ್ರಿಯಿಸಲು 34 ಬಾರಿ ಅವಕಾಶ ನೀಡಲಾಗಿತ್ತು. ಆದ್ರೆ ಅದಕ್ಕೂ ಎಎಪಿ ಪ್ರತಿಕ್ರಿಯೆ ನೀಡಿಲ್ಲವೆಂದು ನೋಟಿಸ್ ನಲ್ಲಿ ಉಲ್ಲೇಖಿಸಲಾಗಿದೆ. ಪಾರದರ್ಶಕ ಹಾಗೂ ಭ್ರಷ್ಟಾಚಾರ ರಹಿತ ಆಡಳಿತದ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಎಎಪಿಗೆ ಇದು ಕಂಟಕವಾಗುವ ಸಾಧ್ಯತೆ ಇದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...