alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಗಳೂರು ಮುಡಿಗೆ ಮತ್ತೊಂದು ಗರಿ: ಐಯುಸಿ ಸ್ಥಾಪನೆಗೆ ಕೇಂದ್ರದ ಅನುಮೋದನೆ

ರಾಜ್ಯ ರಾಜಧಾನಿ ಬೆಂಗಳೂರಿನ ಮುಡಿಗೆ ಮತ್ತೊಂದು ಗರಿ ಸೇರ್ಪಡೆಯಾಗಿದೆ. ಯೋಗವಿಜ್ಞಾನಗಳ ಅಧ್ಯಯನಕ್ಕಾಗಿ ಸುಮಾರು 100 ಕೋಟಿ ರೂ. ವೆಚ್ಚದಲ್ಲಿ ಅಂತರ ವಿಶ್ವವಿದ್ಯಾನಿಲಯ ಸ್ಥಾಪಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಈ ಕುರಿತು ಟ್ವೀಟ್ ಮಾಡಿದ್ದು, ಐಯುಸಿ ಸ್ಥಾಪನೆಗೆ ವಿಶ್ವ ವಿದ್ಯಾಲಯ ಧನ ಸಹಾಯ ಆಯೋಗ ಒಪ್ಪಿಕೊಂಡಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸ್ಥಾಪನೆಯಾಗಲಿರುವ ಐಯುಸಿ, ಯೋಗದ ಕುರಿತು ಸಂಶೋಧನೆ ಕೈಗೊಳ್ಳುವುದು ಹಾಗೂ ಯೋಗದಿಂದಾಗುವ ಲಾಭಗಳ ಕುರಿತು ದಾಖಲೆಯೊಂದಿಗೆ ಮಾಹಿತಿ ನೀಡುವ ಕಾರ್ಯಗಳನ್ನು ಮಾಡಲಿದೆ.

ಜೊತೆಗೆ ಯೋಗ ಶಿಕ್ಷಣವನ್ನು ಬೋಧಿಸಲು ಪಠ್ಯಕ್ರಮ ರೂಪಿಸುವುದರೊಂದಿಗೆ ಯೋಗ ಶಿಕ್ಷಕರನ್ನು ತಯಾರು ಮಾಡಲಿದೆ ಎಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...