alex Certify
ಕನ್ನಡ ದುನಿಯಾ       Mobile App
       

Kannada Duniya

ಚುನಾವಣಾ ಆಯೋಗದ ಕಚೇರಿ ಎದುರು ಯುವ ಕಾಂಗ್ರೆಸ್ ಪ್ರತಿಭಟನೆ

ನವದೆಹಲಿ: ಕೇಂದ್ರ ಚುನಾವಣೆ ಆಯೋಗ ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡುವ ಮೊದಲೇ, ಬಿ.ಜೆ.ಪಿ. ಐ.ಟಿ. ಸೆಲ್ ಪ್ರಮುಖ ಅಮಿತ್ ಮಾಳವಿಯಾ ದಿನಾಂಕ ಪ್ರಕಟಿಸಿದ್ದು ವಿವಾದಕ್ಕೆ ಕಾರಣವಾಗಿದೆ.

ಆಯೋಗ ದಿನಾಂಕ ಘೋಷಿಸುವ ಮೊದಲೇ ಬಹಿರಂಗವಾದ ಹಿನ್ನಲೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಚುನಾವಣಾ ಆಯೋಗದ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ ಆಯೋಗ ನಿಗದಿಪಡಿಸಿದ್ದ ದಿನಾಂಕ ಹೇಗೆ ಸೋರಿಕೆಯಾಗಿದೆ ಎಂದು ಪ್ರಶ್ನಿಸಿದ್ದಾರೆ. ಆಯೋಗ ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕೂಡ, ಚುನಾವಣೆಗೆ ಸಂಬಂಧಿಸಿದ ಮಾಹಿತಿಗಳನ್ನು ಸೋರಿಕೆ ಆಗದಂತೆ ಆಯೋಗ ನೋಡಿಕೊಳ್ಳಬೇಕಿದೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...