alex Certify
ಕನ್ನಡ ದುನಿಯಾ       Mobile App
       

Kannada Duniya

ಕುಡಿದ ಮತ್ತಿನಲ್ಲಿ ಅಪಘಾತವೆಸಗಿ ಪರಾರಿಯಾದ ಚಿತ್ರ ನಿರ್ದೇಶಕ

ತೆಲುಗು ಚಿತ್ರರಂಗದ ಖ್ಯಾತ ನಿರ್ದೇಶಕ ಕೆ.ಎಸ್. ರವೀಂದ್ರ ಕುಡಿದ ಅಮಲಿನಲ್ಲಿ ತಮ್ಮ ಕಾರನ್ನು ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಬಳಿಕ ಕಾರು ನಿಲ್ಲಿಸದೆ ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ.

ಸೋಮವಾರ ರಾತ್ರಿ ಹೈದರಾಬಾದಿನ ಜುಬಿಲಿ ಹಿಲ್ಸ್ ನಲ್ಲಿ ಈ ಘಟನೆ ನಡೆದಿದ್ದು, ‘ಜೈ ಲವಕುಶ’ ಚಿತ್ರದ ಖ್ಯಾತಿಯ ರವೀಂದ್ರ, ವೇಗವಾಗಿ ತಮ್ಮ ಕಾರನ್ನು ಚಲಾಯಿಸಿಕೊಂಡು ಬರುತ್ತಿರುವಾಗ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆಸಿದ್ದಾರೆ. ನಂತರ ಅಲ್ಲಿಂದ ಪರಾರಿಯಾಗಿದ್ದು, ಇದೀಗ ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ರವೀಂದ್ರರನ್ನು ವಶಕ್ಕೆ ಪಡೆದು ಕಾರು ಚಾಲನೆ ಸಂದರ್ಭದಲ್ಲಿ ಅವರು ಮದ್ಯಪಾನ ಮಾಡಿದ್ದರೆ ಇಲ್ಲವೇ ಎಂಬುದನ್ನು ಪರಿಶೀಲಿಸಲು ವೈದ್ಯಕೀಯ ಪರೀಕ್ಷೆ ನಡೆಸಲು ಮುಂದಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...