alex Certify
ಕನ್ನಡ ದುನಿಯಾ       Mobile App
       

Kannada Duniya

ಜಮ್ಮು ಕಾಶ್ಮೀರದಲ್ಲಿ ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರು

air nir 10

ಶ್ರೀನಗರ: ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ ಬುರ್ಹಾನ್ ಮುಜಾಫರ್ ವಾನಿಯನ್ನು ಭದ್ರತಾ ಪಡೆಗಳು, ಹತ್ಯೆ ಮಾಡಿದ ನಂತರ, ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಭದ್ರತಾ ದೃಷ್ಟಿಯಿಂದ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಅಮರನಾಥ ಯಾತ್ರೆಗೆ ಬಂದಿದ್ದ ಸುಮಾರು 500ಕ್ಕೂ ಅಧಿಕ ಮಂದಿ ಕನ್ನಡಿಗರು ಸೇರಿದಂತೆ ವಿವಿಧ ರಾಜ್ಯಗಳ ಯಾತ್ರಾರ್ಥಿಗಳು ಏರ್ ಬೇಸ್ ಕ್ಯಾಂಪ್ ನಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ. ಬೆಂಗಳೂರು, ರಾಯಚೂರು, ಮಂಡ್ಯ, ಮೈಸೂರು, ಕೊಪ್ಪಳ ಮೊದಲಾದ ಕಡೆಗಳಿಂದ ಕರ್ನಾಟಕ ಕಿಸಾನ್ ಯಾತ್ರಾ ಸೇವಾ ಸಂಘದ ಮೂಲಕ ಯಾತ್ರೆ ಕೈಗೊಂಡಿದ್ದ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆಹಾರ ಸಾಮಗ್ರಿಗಳೆಲ್ಲಾ ಖಾಲಿಯಾಗಿದ್ದು, ಕುಡಿಯುವ ನೀರಿಗೂ ತೊಂದರೆಯಾಗಿದೆ.

ಜಮ್ಮು ಕಾಶ್ಮೀರದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿರುವುದರಿಂದ ಯಾತ್ರಾರ್ಥಿಗಳನ್ನು ಕಳುಹಿಸಲು ತೊಂದರೆಯಾಗಿದ್ದು, ಏರ್ ಬೇಸ್ ಕ್ಯಾಂಪ್ ನಲ್ಲಿಯೇ ಆಶ್ರಯ ನೀಡಲಾಗಿದೆ. ಭಾರೀ ಸಂಖ್ಯೆಯಲ್ಲಿ ಯಾತ್ರಾರ್ಥಿಗಳು ಇರುವ ಕಾರಣ ಸೌಕರ್ಯ ಒದಗಿಸುವುದು ಕಷ್ಟಸಾಧ್ಯವಾಗಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...