alex Certify
ಕನ್ನಡ ದುನಿಯಾ       Mobile App
       

Kannada Duniya

ಎಲ್ಲರ ಮನ ಗೆದ್ದಿದೆ ‘ವೈರಲ್’ ಆಗಿರುವ ಈ ಫೋಟೋ

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಫೋಟೋ ಒಂದು ಎಲ್ಲರ ಮನ ಗೆದ್ದಿದೆ. ಜಮ್ಮು ಕಾಶ್ಮೀರದಲ್ಲಿ ಬಾಲಕರ ಜೊತೆ ಪೊಲೀಸ್ ಅಧಿಕಾರಿಯೊಬ್ಬರು ಕ್ರಿಕೆಟ್ ಆಡುತ್ತಿರುವ ಚಿತ್ರ ಇದಾಗಿದ್ದು, ವಿಕೆಟ್ ಕೀಪಿಂಗ್ ಮಾಡುತ್ತಿರುವ ಪೊಲೀಸ್ ಅಧಿಕಾರಿ ತಾವು ಸ್ವರಕ್ಷಣೆಗಾಗಿ ಬಳಸುವ ರಕ್ಷಾ ಕವಚವನ್ನೇ ವಿಕೆಟ್ ಮಾಡಿಕೊಂಡಿದ್ದಾರೆ.

ಮಾಧ್ಯಮವೊಂದರ ಛಾಯಾಗ್ರಾಹಕ ಬಸಿತ್ ಜಾರ್ಗರ್ ಈ ಚಿತ್ರವನ್ನು ತೆಗೆದು ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದು, ಶ್ರೀನಗರದ ಜಾಮಿಯಾ ಮಸೀದಿ ಮುಂಭಾಗದಲ್ಲಿ ಪೊಲೀಸ್ ಅಧಿಕಾರಿ, ಬಾಲಕರೊಂದಿಗೆ ಕ್ರಿಕೆಟ್ ಆಡುತ್ತಿದ್ದ ವೇಳೆ ಇದನ್ನು ಕ್ಲಿಕ್ಕಿಸಲಾಗಿದೆ.

ಈ ಹಿಂದೆ ಶಾಲಾ ವಿದ್ಯಾರ್ಥಿಗಳೂ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದ ಪ್ರಕರಣಗಳ ನಡುವೆ ಕಣಿವೆ ರಾಜ್ಯ ಮತ್ತೆ ಸಹಜ ಸ್ಥಿತಿಗೆ ಮರಳುತ್ತಿರುವ ಸಂಗತಿಯನ್ನು ಈ ಚಿತ್ರ ಬಿಂಬಿಸುತ್ತಿದೆ ಎಂದು ಹಲವರು ಕಮೆಂಟ್ ಮಾಡಿದ್ದಾರೆ. ಅಲ್ಲದೇ ನೂರಾರು ಮಂದಿ ಇದನ್ನು ಶೇರ್ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...