alex Certify
ಕನ್ನಡ ದುನಿಯಾ       Mobile App
       

Kannada Duniya

ರಾಷ್ಟ್ರಗೀತೆ ಪ್ರಸಾರದ ವೇಳೆ ವಿದ್ಯಾರ್ಥಿಗಳ ಸೆಲ್ಫಿ

ಜಮ್ಮು-ಕಾಶ್ಮೀರದ ರಜೌರಿಯಲ್ಲಿರುವ ಬಾಬಾ ಗುಲಾಂ ಶಾ ಬಾದ್ ಶಾ ಯೂನಿವರ್ಸಿಟಿಯ ಕೆಲ ವಿದ್ಯಾರ್ಥಿಗಳು ರಾಷ್ಟ್ರಗೀತೆಗೆ ಎದ್ದು ನಿಂತು ಗೌರವ ಸೂಚಿಸಲು ನಿರಾಕರಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾದ ಬಳಿಕ ರಾಷ್ಟ್ರಗೀತೆಗೆ ಅಗೌರವ ಸೂಚಿಸಿದ ವಿದ್ಯಾರ್ಥಿಗಳ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.

ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಈ ಘಟನೆ ನಡೆದಿದೆ. ಜಮ್ಮು-ಕಾಶ್ಮೀರದ ರಾಜ್ಯಪಾಲ ಎನ್.ಎನ್.ವೊಹ್ರಾ, ರಾಜೌರಿಯ ಉಪ ಆಯಕ್ತರು, ವಿವಿಯ ವೈಸ್ ಚಾನ್ಸಿಲರ್ ಸೇರಿದಂತೆ ಹಲವು ಗಣ್ಯರ ಸಮ್ಮುಖದಲ್ಲೇ ವಿದ್ಯಾರ್ಥಿಗಳು ದುರ್ವರ್ತನೆ ತೋರಿದ್ದಾರೆ.

ರಾಷ್ಟ್ರಗೀತೆ ಪ್ರಸಾರದ ವೇಳೆ ಎದ್ದು ನಿಂತು ಗೌರವ ಸೂಚಿಸುವ ಬದಲು ಅಲ್ಲೇ ಕುಳಿತು ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳ ಈ ವರ್ತನೆ ಉಳಿದ ಸ್ಟೂಡೆಂಟ್ಸ್ ಹಾಗೂ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಚೀನಾದಲ್ಲಿ ಈ ರೀತಿ ರಾಷ್ಟ್ರಗೀತೆಗೆ ಅಗೌರವ ತೋರಿದ್ರೆ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...