alex Certify
ಕನ್ನಡ ದುನಿಯಾ       Mobile App
       

Kannada Duniya

ಜಮ್ಮು ಕಾಶ್ಮೀರದಲ್ಲಿ ಪಾಕ್ ಪ್ರೇರಿತ ಮೂವರು ಉಗ್ರರು ವಶಕ್ಕೆ

Militants

ಭಾರತದ ಗಡಿಯಲ್ಲಿ ಉಗ್ರ ಕೃತ್ಯವೆಸಗಲು ಸಂಚು ರೂಪಿಸುತ್ತಿದ್ದ ಜೈಶ್-ಎ-ಮೊಹಮ್ಮದ್ ಸಂಘಟನೆಯ ಕಮಾಂಡರ್ ಸೇರಿದಂತೆ ಮೂವರು ಉಗ್ರರನ್ನು ಜಮ್ಮು ಕಾಶ್ಮೀರದ ಹಂದ್ವಾರ ಹೊರ ವಲಯದಲ್ಲಿ ವಶಕ್ಕೆ ಪಡೆದಿರುವ ಮಾಹಿತಿ ಲಭ್ಯವಾಗಿದೆ.

ಪಠಾಣ್ ಕೋಟ್ ದಾಳಿಗೂ ಮುನ್ನ ಸುಮಾರು 13 ಉಗ್ರರು ಭಾರತಕ್ಕೆ ಅಕ್ರಮ ಪ್ರವೇಶ ಮಾಡಿದ್ದು, ಎಚ್ಚರಿಕೆ ವಹಿಸುವಂತೆ ಗುಪ್ತಚರ ಇಲಾಖೆ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಭಾರತೀಯ ಗಡಿ ಭದ್ರತಾ ಪಡೆಯ ಯೋಧರು ಹಾಗೂ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಗಡಿಯಲ್ಲಿ ಹದ್ದಿನ ಕಣ್ಣಿಟ್ಟಿದ್ದರು.

ಹಂದ್ವಾರ ಹೊರವಲಯದಲ್ಲಿ ಮೂವರು ಉಗ್ರರು ಅಡಗಿ ಕುಳಿತಿದ್ದಾರೆ ಎಂಬ ಅಧಿಕೃತ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸರು, ಪಾಕಿಸ್ತಾನ ಉಗ್ರರ ಜತೆ ನಿರಂತರ ಸಂಪರ್ಕದಲ್ಲಿದ್ದ ಮೂವರು ಉಗ್ರರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...