alex Certify
ಕನ್ನಡ ದುನಿಯಾ       Mobile App
       

Kannada Duniya

ಚಿರಂಜೀವಿ ಜನಸೇನಾ ಸೇರಲ್ಲ ಎಂದ ಪವನ್ ಕಲ್ಯಾಣ್

download

ಹೈದರಾಬಾದ್: ಜನಸೇನಾ ಸ್ಥಾಪನೆಯ 3 ನೇ ವಾರ್ಷಿಕೋತ್ಸವ ಅಂಗವಾಗಿ, ಪಕ್ಷದ ಸಂಸ್ಥಾಪಕ ಪವರ್ ಸ್ಟಾರ್ ಪವನ್ ಕಲ್ಯಾಣ್ ಹೈದರಾಬಾದ್ ನಲ್ಲಿ ವೆಬ್ ಸೈಟ್ ಲಾಂಚ್ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಎರಡೂ ತೆಲುಗು ರಾಜ್ಯಗಳಲ್ಲಿ ಜನಸೇನಾ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ತಿಳಿಸಿದ್ದಾರೆ.

ಶೇ. 60 ರಷ್ಟು ಸೀಟ್ ಗಳನ್ನು ಯುವಕರಿಗೆ ನೀಡಲಾಗುವುದು. ನಾನು ಅನಂತಪುರದಿಂದ ಸ್ಪರ್ಧಿಸಲಿದ್ದೇನೆ ಎಂದು ಹೇಳಿದ್ದಾರೆ.

ಜೂನ್ ನಿಂದ ಪಕ್ಷದ ಸಂಘಟನೆ ಚುರುಕುಗೊಳಿಸಲಾಗುವುದು. ಮಹಿಳೆಯರು, ವಿದ್ಯಾರ್ಥಿಗಳು, ಯುವಕರು ಸೇರಿದಂತೆ ಎಲ್ಲಾ ವರ್ಗದ ಜನರನ್ನು ದೃಷ್ಠೀಯಲ್ಲಿಟ್ಟುಕೊಂಡು 32 ಅಂಶದ ಮೇಲೆ ಗಮನ ಕೇಂದ್ರೀಕರಿಸಿ ಹೋರಾಟ ನಡೆಸಲಾಗುವುದು ಎಂದಿದ್ದಾರೆ.

ತೆಲಂಗಾಣ ಮತ್ತು ಆಂಧ್ರ ಪ್ರದೇಶದಲ್ಲಿ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದೆ. ಸಹೋದರ ಚಿರಂಜೀವಿ ಜನಸೇನಾ ಸೇರುವುದಿಲ್ಲ. ಅವರ ಮತ್ತು ನನ್ನ ಆಲೋಚನೆಗಳು ಬೇರೆಯಾಗಿವೆ ಎಂದು ವಿವರಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...