alex Certify
ಕನ್ನಡ ದುನಿಯಾ       Mobile App
       

Kannada Duniya

ಜಯಲಲಿತಾ ಅಂತಿಮ ದರ್ಶನಕ್ಕೆ ಜನಸಾಗರ

jaya-6-tus

ಚೆನ್ನೈ: ಚೆನ್ನೈನ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ತಡರಾತ್ರಿ ನಿಧನರಾಗಿದ್ದಾರೆ.

ಕಳೆದ ಸೆಪ್ಟಂಬರ್ 22 ರಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ, ದೇಶ ವಿದೇಶಗಳ ತಜ್ಞ ವೈದ್ಯರು ಚಿಕಿತ್ಸೆ ನೀಡಿದ್ದರು. ಭಾನುವಾರ ಜಯಲಲಿತಾ ಅವರಿಗೆ ಹಠಾತ್ ಹೃದಯಾಘಾತ ಸಂಭವಿಸಿದ್ದು, ಕೂಡಲೇ ವೈದ್ಯರು ಚಿಕಿತ್ಸೆ ನೀಡಿದ್ದರಾದರೂ, ಫಲಕಾರಿಯಾಗಲಿಲ್ಲ. ಜಯಲಲಿತಾ ಅವರಿಗೆ ಹೃದಯಾಘಾತ ಸುದ್ದಿ ತಿಳಿದ ನಂತರ ತಮಿಳುನಾಡಿನಲ್ಲಿ ಪರಿಸ್ಥಿತಿ ಬಿಗಡಾಯಿಸಿದ ಹಿನ್ನಲೆಯಲ್ಲಿ ಅವರ ನಿಧನದ ಸುದ್ದಿಯನ್ನು ತಕ್ಷಣಕ್ಕೆ ಬಹಿರಂಗಪಡಿಸಿರಲಿಲ್ಲ. ತಡರಾತ್ರಿ ಅಪೊಲೊ ಆಸ್ಪತ್ರೆ ವತಿಯಿಂದ ಚಿಕಿತ್ಸೆ ಫಲಕಾರಿಯಾಗದೆ ಜಯಲಲಿತಾ ಅವರು ಮೃತಪಟ್ಟಿದ್ದಾರೆ ಎಂದು ಪ್ರಕಟಣೆ ನೀಡಲಾಗಿದೆ.

ಜಯಲಲಿತಾ ಅವರ ಪಾರ್ಥಿವ ಶರೀರವನ್ನು ಚೆನ್ನೈನ ರಾಜಾಜಿ ಹಾಲ್ ನಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದ್ದು, ಅಪಾರ ಸಂಖ್ಯೆಯ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು, ಬೆಂಬಲಿಗರು ದರ್ಶನ ಪಡೆಯುತ್ತಿದ್ದಾರೆ. ಸಂಜೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಿದ್ದು, ಸಂಜೆ 4.30 ಕ್ಕೆ ಮರೀನಾ ಬೀಚ್ ನಲ್ಲಿರುವ ಎಂ.ಜಿ.ಆರ್. ಸಮಾಧಿ ಬಳಿ ಅಂತ್ಯ ಸಂಸ್ಕಾರ ನಡೆಯಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...