alex Certify
ಕನ್ನಡ ದುನಿಯಾ       Mobile App
       

Kannada Duniya

ಅಂತ್ಯ ಸಂಸ್ಕಾರ ವೀಕ್ಷಣೆಗೆ ಎಲ್.ಇ.ಡಿ. ಸ್ಕ್ರೀನ್ ಅಳವಡಿಕೆ

amam-12

ಚೆನ್ನೈ: ತಮಿಳುನಾಡಿನ ‘ಅಮ್ಮ’ ಜಯಲಲಿತಾ ಅವರ, ಅಂತ್ಯ ಸಂಸ್ಕಾರ ನಡೆಯುವ ಚೆನ್ನೈನ ಮರೀನಾ ಬೀಚ್ ಗೆ ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಲಾಗಿದೆ.

ಮರೀನಾ ಬೀಚ್ ನಲ್ಲಿರುವ ಎಂ.ಜಿ.ಆರ್. ಸ್ಮಾರಕದ ಪಕ್ಕದಲ್ಲೇ ಜಯಲಲಿತಾರ ಅಂತ್ಯಸಂಸ್ಕಾರ ನಡೆಯಲಿದ್ದು, ಈಗಾಗಲೇ ಉಸ್ತುವಾರಿ ರಾಜ್ಯಪಾಲ ವಿದ್ಯಾಸಾಗರರಾವ್, ಮುಖ್ಯಮಂತ್ರಿ ಪನ್ನೀರ್ ಸೆಲ್ವಂ, ಶಶಿಕಲಾ ಹಾಗೂ ಪಕ್ಷದ ಸಂಸದರು, ಸಚಿವರು ಸ್ಥಳದಲ್ಲಿದ್ದಾರೆ. ಗಣ್ಯರು, ಪ್ರಮುಖರಿಗೆ ಮಾತ್ರ ಅಂತ್ಯಸಂಸ್ಕಾರ ಸ್ಥಳಕ್ಕೆ ಪ್ರವೇಶ ನೀಡಲಾಗಿದೆ. ಅಪಾರ ಸಂಖ್ಯೆಯ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದ್ದು, ಸಾರ್ವಜನಿಕರಿಗೆ ಅಂತ್ಯ ಸಂಸ್ಕಾರ ವೀಕ್ಷಿಸಲು ಅನುಕೂಲವಾಗುವಂತೆ ಬೃಹತ್ ಎಲ್.ಇ.ಡಿ. ಸ್ಕ್ರೀನ್ ಗಳನ್ನು ಅಳವಡಿಸಲಾಗಿದೆ.

ತಮಿಳು ಅಯ್ಯಂಗಾರ್ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನಗಳು ನಡೆಯಲಿದ್ದು, ಜಯಲಲಿತಾ ಅವರ ಪಾರ್ಥಿವ ಶರೀರ ಮರೀನಾ ಬೀಚ್ ತಲುಪಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...