alex Certify
ಕನ್ನಡ ದುನಿಯಾ       Mobile App
       

Kannada Duniya

ತಮಿಳುನಾಡಿನಲ್ಲಿ ಶೀಘ್ರವೇ ಉಚಿತ ಬಸ್ ಸೌಲಭ್ಯ

jayalalitha

ತಮಿಳುನಾಡಿನ ವಿಧಾನಸಭೆ ಚುನಾವಣೆ ಹತ್ತಿರವಾಗತೊಡಗಿದಂತೆ ಮುಖ್ಯಮಂತ್ರಿ ಜಯಲಲಿತಾ ಜನಪ್ರಿಯ ಯೋಜನೆ ಜಾರಿಗೊಳಿಸತೊಡಗಿದ್ದಾರೆ. ಈಗಾಗಲೇ ಹಲವಾರು ಜನಪ್ರಿಯ ಯೋಜನೆಗಳನ್ನು ಜಾರಿಗೆ ತಂದಿರುವ ಅವರು ಮತ್ತೊಂದು ಯೋಜನೆ ಜಾರಿಗೆ ಮುಂದಾಗಿದ್ದಾರೆ.

ಇನ್ನು ಮುಂದೆ ತಮಿಳುನಾಡಿನಲ್ಲಿ ಹಿರಿಯ ನಾಗರೀಕರು ಸಾರಿಗೆ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಸದ್ಯಕ್ಕೆ ಚೆನ್ನೈ ಮಹಾನಗರದಲ್ಲಿ ಈ ಯೋಜನೆ ಜಾರಿಗೆ ಮುಂದಾಗಿದ್ದು, ಮುಂದಿನ ಹಂತಗಳಲ್ಲಿ ರಾಜ್ಯದೆಲ್ಲೆಡೆ ಯೋಜನೆ ಜಾರಿಗೆ ತರಲಾಗುವುದು. 2011ರ ವಿಧಾನಸಭೆ ಚುನಾವಣೆಯಲ್ಲಿ ಜಯಲಲಿತಾ ಈ ಬಗ್ಗೆ ಭರವಸೆ ನೀಡಿದ್ದು, ಈಗ ಅದನ್ನು ಈಡೇರಿಸಿದ್ದಾರೆ. ಇನ್ನು ಮುಂದೆ ಚೆನ್ನೈ ಮಹಾನಗರದಲ್ಲಿ ಹಿರಿಯ ನಾಗರೀಕರು ಉಚಿತವಾಗಿ ಸಂಚರಿಸಬಹುದಾಗಿದೆ.

ಇದಕ್ಕಾಗಿ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ ಟೋಕನ್ ಪಡೆದುಕೊಳ್ಳಬೇಕು. ಇಲ್ಲವೇ ಬಸ್ ಡಿಪೋಗಳಲ್ಲಿ ಅರ್ಜಿ ಪಡೆದುಕೊಳ್ಳಬಹುದಾಗಿದೆ. ಹೀಗೆ ಟೋಕನ್ ಪಡೆದ ನಾಗರೀಕರಿಗೆ ತಿಂಗಳಿಗೆ 10 ಸಲ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುವುದು. ಜಯಲಲಿತಾ ಹುಟ್ಟುಹಬ್ಬದ ಪ್ರಯುಕ್ತ ಫೆ.24ರಿಂದ ಈ ಯೋಜನೆ ಜಾರಿಗೆ ಬರಲಿದ್ದು, ಪ್ರಾಯೋಗಿಕ ಯೋಜನೆ ಯಶಸ್ವಿಯಾದರೆ, ತಮಿಳುನಾಡಿನಾದ್ಯಂತ ವಿಸ್ತರಿಸುವ ಸಾಧ್ಯತೆ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...