alex Certify
ಕನ್ನಡ ದುನಿಯಾ       Mobile App
       

Kannada Duniya

77 ‘ಅಮ್ಮ’ ಅಭಿಮಾನಿಗಳಿಗೆ ತಲಾ 3 ಲಕ್ಷ ರೂ.

jaya-amma

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿಯಾಗಿದ್ದ ಜಯಲಲಿತಾ ಅವರ ಸಾವಿನ ಸುದ್ದಿ ಕೇಳಿ, ಆಘಾತಕ್ಕೆ ಒಳಗಾದ 77 ಮಂದಿ ಮೃತಪಟ್ಟಿದ್ದಾರೆ.

ಹೀಗೆ ಮೃತಪಟ್ಟವರ ಪಟ್ಟಿಯನ್ನು ಸಿದ್ಧಪಡಿಸಿರುವ ಎ.ಐ.ಎ.ಡಿ.ಎಂ.ಕೆ. ಪಕ್ಷದ ಮುಖಂಡರು, ನಿಧನರಾದ ‘ಅಮ್ಮ’ ಅಭಿಮಾನಿಗಳ ಕುಟುಂಬದವರಿಗೆ ತಲಾ 3 ಲಕ್ಷ ರೂ. ಕೊಡಲು ತೀರ್ಮಾನಿಸಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿದ್ದವರಿಗೆ ತಲಾ 50,000 ರೂ ಕೊಡಲಾಗುವುದು. ಮೃತರ ಮನೆಗಳಿಗೆ ತೆರಳಿ ಅವರ ಕುಟುಂಬದವರಿಗೆ ಸಾಂತ್ವನ ಹೇಳಿ ಆರ್ಥಿಕ ನೆರವು ನೀಡಲಾಗುವುದು.

ಜಯಲಲಿತಾ ಅವರ ಸಾವಿನ ಸುದ್ದಿಯನ್ನು ಕೇಳಿದ ಮತ್ತು ಟಿ.ವಿ. ವಾಹಿನಿಗಳಲ್ಲಿ ಅವರ ಪಾರ್ಥಿವ ಶರೀರವನ್ನು ನೋಡಿದ ಅನೇಕರು ಶಾಕ್ ಗೆ ಒಳಗಾಗಿ ಮೃತಪಟ್ಟಿದ್ದಾರೆ. ಹೀಗೆ ಮೃತಪಟ್ಟವರ ಮಾಹಿತಿಯನ್ನು ಪಡೆದುಕೊಂಡ ಎ.ಐ.ಎ.ಡಿ.ಎಂ.ಕೆ. ನಾಯಕರು ನೆರವು ನೀಡಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.

 

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...