alex Certify
ಕನ್ನಡ ದುನಿಯಾ       Mobile App
       

Kannada Duniya

ಟಿ.ವಿ. ನೋಡುತ್ತಿದ್ದಾಗಲೇ ಮೃತಪಟ್ಟ ಜಯಾ ಅಭಿಮಾನಿ

fan-ded

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಹೃದಯಾಘಾತವಾಗಿದೆ ಎಂಬ ಸುದ್ದಿ ಕೇಳಿಯೇ, ಅವರ ಅಭಿಮಾನಿಯೊಬ್ಬ ಮೃತಪಟ್ಟಿದ್ದಾರೆ.

ಕಡಲೂರು ಜಿಲ್ಲೆಯ ಸನ್ಯಾಸಿಪೇಟೆ ಗ್ರಾಮದ ನೀಲಕಂಠನ್ ಮೃತಪಟ್ಟವರು. ಮನೆಯಲ್ಲಿ ಟಿ.ವಿ. ನೋಡುತ್ತಿದ್ದ ನೀಲಕಂಠನ್ ಅವರಿಗೆ ಜಯಲಲಿತಾ ಅವರಿಗೆ ಹೃದಯಾಘಾತವಾಗಿದೆ ಎಂಬ ಸುದ್ದಿ ಕೇಳಿ ಶಾಕ್ ಆಗಿದ್ದು, ಹಠಾತ್ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ. ಎ.ಐ.ಎ.ಡಿ.ಎಂ.ಕೆ. ಪಕ್ಷದ ಪ್ರಮುಖ ಕಾರ್ಯಕರ್ತನಾಗಿರುವ ನೀಲಕಂಠನ್, ಜಯಲಲಿತಾ ಆಸ್ಪತ್ರೆ ಸೇರಿದ ಬಳಿಕ ಅವರ ಚೇತರಿಕೆಗಾಗಿ ಪ್ರಾರ್ಥಿಸಿ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿದ್ದರು.

ಭಾನುವಾರ ಜಯಲಲಿತಾ ಅವರಿಗೆ ಹೃದಯಾಘಾತವಾಗಿದೆ ಎಂಬ ಸುದ್ದಿ ನೋಡುತ್ತಿದ್ದಂತೆಯೇ ಅವರಿಗೆ ಹೃದಯಾಘಾತವಾಗಿದೆ. ಅವರನ್ನು ಕಡಲೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಮೃತಪಟ್ಟಿದ್ದಾರೆ. ಜಯಲಲಿತಾ ಅವರಿಗೆ ಅಪಾರ ಸಂಖ್ಯೆಯ ಬೆಂಬಲಿಗರು, ಅಭಿಮಾನಿಗಳಿದ್ದು, ಅವರೆಲ್ಲಾ ಆತಂಕಕ್ಕೆ ಒಳಗಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...