alex Certify
ಕನ್ನಡ ದುನಿಯಾ       Mobile App
       

Kannada Duniya

ಎಐಎಡಿಎಂಕೆ ಶಾಸಕರಿಗೆ ತುರ್ತಾಗಿ ಚೆನ್ನೈಗೆ ಆಗಮಿಸಲು ಬುಲಾವ್

niru-sun-sಕಳೆದ 73 ದಿನಗಳಿಂದ ಚೆನ್ನೈನ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಭಾನುವಾರ ರಾತ್ರಿ ಹೃದಯಾಘಾತವಾದ ಕಾರಣ ತುರ್ತು ಚಿಕಿತ್ಸಾ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕಳೆದ ರಾತ್ರಿಯಿಂದಲೇ ಅಪೊಲೋ ಆಸ್ಪತ್ರೆ ಬಳಿ ಜಯಾ ಅಭಿಮಾನಿಗಳು, ಎಐಎಡಿಎಂಕೆ ಕಾರ್ಯಕರ್ತರು ಭಾರೀ ಸಂಖ್ಯೆಯಲ್ಲಿ ಜಮಾಯಿಸಿದ್ದು, ಜಯಾ ಆರೋಗ್ಯ ಸ್ಥಿತಿ ಕುರಿತು ಆತಂಕಗೊಂಡಿದ್ದಾರೆ. ಈ ಮಧ್ಯೆ ಇಂದು ಬೆಳಿಗ್ಗೆ ಅಪೊಲೋ ಆಸ್ಪತ್ರೆಯಲ್ಲಿಯೇ ಸಚಿವ ಸಂಪುಟದ ತುರ್ತು ಸಭೆ ನಡೆಸಲಾಗಿದ್ದು, 12-30 ಕ್ಕೆ ಎಐಎಡಿಎಂಕೆ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.

ಈ ಹಿನ್ನಲೆಯಲ್ಲಿ ತಮ್ಮ ತಮ್ಮ ಕ್ಷೇತ್ರಗಳಲ್ಲಿರುವ ಎಐಎಡಿಎಂಕೆ ಶಾಸಕರು ತುರ್ತಾಗಿ ಚೆನ್ನೈಗೆ ಆಗಮಿಸುವಂತೆ ಸೂಚನೆ ನೀಡಲಾಗಿದೆ. ಅಪೊಲೋ ಆಸ್ಪತ್ರೆ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಖುದ್ದು ಪೊಲೀಸ್ ಮಹಾ ನಿರ್ದೇಶಕರೇ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಜಯಲಲಿತಾರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿರುವಾಗಲೇ ಶಾಸಕಾಂಗ ಪಕ್ಷದ ಸಭೆ ಕರೆದಿರುವುದು ಹಲವು ಊಹಾಪೋಹಗಳಿಗೆ ಕಾರಣವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...