alex Certify
ಕನ್ನಡ ದುನಿಯಾ       Mobile App
       

Kannada Duniya

ಜಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದೃಶ್ಯ ರಿಲೀಸ್

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಸಾವಿನ ಕುರಿತಂತೆ ಹಲವು ಅನುಮಾನಗಳು ಹರಿದಾಡುತ್ತಿರುವ ಮಧ್ಯೆ ಜಯಾ ಆಪ್ತೆ ಶಶಿಕಲಾ ಸಂಬಂಧಿ ಟಿಟಿವಿ ದಿನಕರನ್ ಬಣದವರು ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದಾರೆ.

ಜಯಲಲಿತಾ ಪ್ರತಿನಿಧಿಸುತ್ತಿದ್ದ ಆರ್.ಕೆ. ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಾಳೆ ನಡೆಯುತ್ತಿರುವ ಮಧ್ಯೆ ಈ ವಿಡಿಯೋ ಬಿಡುಗಡೆಗೊಂಡಿದ್ದು, ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಯಲಲಿತಾ ಜ್ಯೂಸ್ ಕುಡಿಯುತ್ತಿರುವ ದೃಶ್ಯ ಈಗ ಬಿಡುಗಡೆಗೊಂಡಿರುವ ವಿಡಿಯೋದಲ್ಲಿದೆ.

ಆರ್.ಕೆ. ನಗರ ವಿಧಾನಸಭಾ ಕ್ಷೇತ್ರದಲ್ಲಿ ಟಿಟಿವಿ ದಿನಕರನ್ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ಜಯಲಲಿತಾ ಸಾವಿನ ಕುರಿತ ಊಹಾಪೋಹಗಳಿಗೆ ತೆರೆ ಎಳೆಯಲು ಆ ಮೂಲಕ ತಮ್ಮಗಳ ವಿರುದ್ದ ಕೇಳಿ ಬರುತ್ತಿರುವ ಆರೋಪಗಳಿಗೆ ಸ್ಪಷ್ಟನೆಯಾಗಿ ಟಿಟಿವಿ ದಿನಕರನ್ ಬಣ ವಿಡಿಯೋ ಬಿಡುಗಡೆ ಮಾಡಿದೆ ಎನ್ನಲಾಗುತ್ತಿದೆ. ಆಸ್ಪತ್ರೆಗೆ ದಾಖಲಾಗಿದ್ದ ಜಯಲಲಿತಾ ಜ್ಯೂಸ್ ಕುಡಿಯುತ್ತಿದ್ದ ವೇಳೆ ಶಶಿಕಲಾ ಸಂಬಂಧಿಕರೋರ್ವರು ತಮ್ಮ ಮೊಬೈಲ್ ನಲ್ಲಿ ಈ ದೃಶ್ಯವನ್ನು ಸೆರೆ ಹಿಡಿದಿದ್ದರೆಂಬ ಮಾತು ಕೇಳಿ ಬರುತ್ತಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...