alex Certify
ಕನ್ನಡ ದುನಿಯಾ       Mobile App
       

Kannada Duniya

ಅಧಿಕಾರ ಸ್ವೀಕಾರಕ್ಕೂ ಮುನ್ನ ಜಯಾ ಸಮಾಧಿಗೆ ನಮನ

jayala-namana

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಒ. ಪನ್ನೀರ್ ಸೆಲ್ವಂ ಮತ್ತು ಅವರ ಸಂಪುಟದ ಸಚಿವರು, ನಾಳೆ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಅಧಿಕಾರ ಸ್ವೀಕರಿಸುವ ಮೊದಲು ಪನ್ನೀರ್ ಸೆಲ್ವಂ, ಜಯಲಲಿತಾ ಅವರ ಸಮಾಧಿಗೆ ನಮನ ಸಲ್ಲಿಸಿದ್ದಾರೆ.

ಚೆನ್ನೈನ ಮರಿನಾ ಬೀಚ್ ನಲ್ಲಿರುವ ಸಮಾಧಿ ಸ್ಥಳಕ್ಕೆ ಜಯಾ ಅವರ ಆಪ್ತೆ ಶಶಿಕಲಾ ಅವರೊಂದಿಗೆ ಆಗಮಿಸಿದ್ದ ಪನ್ನೀರ್ ಸೆಲ್ವಂ ಅವರು, ಎಂ.ಜಿ.ಆರ್., ಜಯಲಲಿತಾರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಸಚಿವರಾದ ದಿಂಡಿಗಲ್ ಶ್ರೀನಿವಾಸ್, ಎಡಪಾಡಿ ಪಳನಿಸ್ವಾಮಿ, ವೇಲುಸ್ವಾಮಿ ಮೊದಲಾದವರು ಇದ್ದರು.

ಸೋಮವಾರ ರಾತ್ರಿಯೇ ಪನ್ನೀರ್ ಸೆಲ್ವಂ ಮತ್ತು ಅವರ ಸಂಪುಟದ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದ್ದು, ನಾಳೆ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಶಶಿಕಲಾ ಅವರು ಪಕ್ಷದ ಪ್ರಮುಖ ಹುದ್ದೆಯನ್ನು ಅಲಂಕರಿಸುವ ಸಾಧ್ಯತೆ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...