alex Certify
ಕನ್ನಡ ದುನಿಯಾ       Mobile App
       

Kannada Duniya

ಪಕ್ಷದ ಸಾರಥ್ಯ ವಹಿಸಿಕೊಳ್ಳಲು ಶಶಿಕಲಾಗೆ ಮನವಿ

ss-sasiklal

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಮತ್ತು ಎ.ಐ.ಎ.ಡಿ.ಎಂ.ಕೆ. ಅಧಿನಾಯಕಿಯಾಗಿ ಕಾರ್ಯನಿರ್ವಹಿಸಿದ್ದ ಜಯಲಲಿತಾ ನಿಧನದ  ನಂತರ, ಇಂದು ಪಕ್ಷದ ಪದಾಧಿಕಾರಿಗಳ ಸಭೆ ನಡೆದಿದೆ.

ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯದಂತೆ, ಪಕ್ಷದ ಸಾರಥ್ಯವನ್ನು ಜಯಾ ಅವರ ಆಪ್ತೆ ಶಶಿಕಲಾ ಅವರು ವಹಿಸಿಕೊಳ್ಳಬೇಕೆಂದು ಹೇಳಲಾಗಿದೆ. ಮುಖ್ಯಮಂತ್ರಿ ಪನ್ನೀರ್ ಸೆಲ್ವಂ, ಸಚಿವ ದಿಂಡಿಗಲ್ ಶ್ರೀನಿವಾಸ್ ಮೊದಲಾದವರು ಪೋಯಸ್ ಗಾರ್ಡನ್ ನಲ್ಲಿರುವ ನಿವಾಸಕ್ಕೆ ತೆರಳಿ ಈ ಕುರಿತು ಮನವಿ ಮಾಡಿದ್ದಾರೆ. ಜಯಲಲಿತಾ ಪ್ರಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಅವರ ನಂತರದಲ್ಲಿ ಪಕ್ಷವನ್ನು ಶಶಿಕಲಾ ಮುನ್ನಡೆಸಲಿ ಎಂಬುದು ಹೆಚ್ಚಿನ ನಾಯಕರ ಅಭಿಪ್ರಾಯವಾಗಿದೆ ಎಂದು ದಿಂಡಿಗಲ್ ಶ್ರೀನಿವಾಸ್ ಹೇಳಿದ್ದಾರೆ.

ಇನ್ನು ಈ ಕುರಿತು ಪ್ರತಿಕ್ರಿಯೆ ನೀಡಿರುವ ಪಕ್ಷದ ವಕ್ತಾರ ಸಿ. ಪೊನ್ನೈಯನ್, ಜಯಲಲಿತಾ ಅವರ ಹಾದಿಯಲ್ಲಿ ಪಕ್ಷವನ್ನು ಮುನ್ನಡೆಸುವ, ಕಾರ್ಯಕರ್ತರ ಬಗ್ಗೆ ಕಾಳಜಿ ವಹಿಸುವವರನ್ನು ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸರ್ವಾನುಮತದಿಂದ ಆಯ್ಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಶಶಿಕಲಾ ಸದ್ಯಕ್ಕೆ ಯಾವುದೇ ಹುದ್ದೆಯನ್ನು ಅಲಂಕರಿಸದಿದ್ದರೂ, ಪಕ್ಷ ಮತ್ತು ಆಡಳಿತದಲ್ಲಿ ಅವರ ನಿರ್ಧಾರ ಪಡೆದುಕೊಂಡೇ ಮುನ್ನಡೆಯಲಾಗುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...