alex Certify
ಕನ್ನಡ ದುನಿಯಾ       Mobile App
       

Kannada Duniya

‘ಜಯಲಲಿತಾ ಶೀಘ್ರವೇ ಕಾರ್ಯ ನಿರ್ವಹಿಸಲಿದ್ದಾರೆ’

cm-tn

ಚೆನ್ನೈ: ‘ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದ್ದು, ಶೀಘ್ರವೇ ಅವರು ಕಾರ್ಯನಿರ್ವಹಿಸಲಿದ್ದಾರೆ’.

ಹೀಗೆಂದು ಹೇಳಿದ್ದು, ಎ.ಐ.ಎ.ಡಿ.ಎಂ.ಕೆ. ಪಕ್ಷದ ವಕ್ತಾರ ಸಿ.ಪೊನ್ನಯನ್. ಚೆನ್ನೈನ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜಯಲಲಿತಾ ಅವರ ಆರೋಗ್ಯದಲ್ಲಿ ಉತ್ತಮವಾದ ಸುಧಾರಣೆ ಕಂಡುಬಂದಿದೆ. ಜಯಲಲಿತಾ ಅವರು ಶೀಘ್ರವೇ ಗುಣಮುಖರಾಗಿ ಕಾರ್ಯನಿರ್ವಹಿಸಲಿದ್ದಾರೆ. ಅವರಿಗೆ ಫಿಜಿಯೋಥೆರಪಿ ಇನ್ನಿತರ ಚಿಕಿತ್ಸೆಗಳನ್ನು ಮುಂದುವರೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಜಯಲಲಿತಾ ಅವರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ಅವರು ತಿಳಿಸಿದ್ದಾರೆ. ಸೆಪ್ಟಂಬರ್ 22 ರಂದು ಚೆನ್ನೈನ ಅಪೊಲೊ ಆಸ್ಪತ್ರೆಗೆ ದಾಖಲಾಗಿರುವ ಜಯಲಲಿತಾ ಅವರಿಗೆ, ತಜ್ಞ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಅನೇಕ ಗಣ್ಯರು ಆಸ್ಪತ್ರೆಗೆ ತೆರಳಿ ಅವರ ಆರೋಗ್ಯ ವಿಚಾರಿಸಿದ್ದಾರೆ.

ಜಯಲಲಿತಾ ಅವರ ಅನುಪಸ್ಥಿತಿಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಪನ್ನೀರ್ ಸೆಲ್ವಂ ಆಡಳಿತ ನಡೆಸುತ್ತಿದ್ದಾರೆ. ಶೀಘ್ರವೇ ಜಯಲಲಿತಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...