alex Certify
ಕನ್ನಡ ದುನಿಯಾ       Mobile App
       

Kannada Duniya

ಜಯಲಲಿತಾ ಅಂತಿಮ ಯಾತ್ರೆ ಆರಂಭ

jaya-rajaji-759ಹೃದಯಾಘಾತಕ್ಕೊಳಗಾಗಿ ಸೋಮವಾರ ರಾತ್ರಿ 11-30 ಕ್ಕೆ ನಿಧನರಾದ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾರ ಅಂತಿಮ ಯಾತ್ರೆ ಆರಂಭವಾಗಿದ್ದು, ಲಕ್ಷಾಂತರ ಮಂದಿ ಅಗಲಿದ ನಾಯಕಿಗೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ.

ಅಪೊಲೋ ಆಸ್ಪತ್ರೆಯಲ್ಲಿ ನಿಧನರಾದ ಜಯಲಲಿತಾರ ಪಾರ್ಥಿವ ಶರೀರವನ್ನು ಮೊದಲಿಗೆ ಅವರ ಪೋಯಸ್ ಗಾರ್ಡನ್ ನಿವಾಸಕ್ಕೆ ಕೊಂಡೊಯ್ದು ಬಳಿಕ ರಾಜಾಜಿ ಹಾಲ್ ನಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿತ್ತು. ಶ್ರೀಸಾಮಾನ್ಯರಿಂದ ಹಿಡಿದು ಗಣ್ಯ ವ್ಯಕ್ತಿಗಳವರೆಗೆ ಸಂಜೆ 4-30 ರ ತನಕ ಲಕ್ಷಾಂತರ ಮಂದಿ ಅಂತಿಮ ದರ್ಶನ ಪಡೆದಿದ್ದಾರೆ.

ನಂತರ ರಾಜಾಜಿ ಮೈದಾನದಿಂದ ಅಂತ್ಯಕ್ರಿಯೆ ನೆರವೇರಿಸುವ ಮರೀನಾ ಬೀಚ್ ಗೆ ಪಾರ್ಥಿವ ಶರೀರವನ್ನು ವಿಶೇಷವಾಗಿ ಅಲಂಕೃತಗೊಂಡಿದ್ದ ವಾಹನದಲ್ಲಿ ಕೊಂಡೊಯ್ಯಲಾಗಿದ್ದು, ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದ ಲಕ್ಷಾಂತರ ಮಂದಿ ನೆಚ್ಚಿನ ನಾಯಕಿಗೆ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...