alex Certify
ಕನ್ನಡ ದುನಿಯಾ       Mobile App
       

Kannada Duniya

ಯಾವುದೇ ಚಿಕಿತ್ಸೆಗೂ ಸ್ಪಂದಿಸದ ಜಯಲಲಿತಾ

jayalalithaa_image-4556ಹೃದಯಾಘಾತಕ್ಕೊಳಗಾಗಿ ಚೆನ್ನೈನ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾರ ಆರೋಗ್ಯ ಸುಧಾರಣೆಗೆ ತಜ್ಞ ವೈದ್ಯರ ತಂಡ ಅವಿರತವಾಗಿ ಶ್ರಮಿಸುತ್ತಿದ್ದರೂ ಯಾವುದೇ ಚಿಕಿತ್ಸೆಗೆ ಜಯಲಲಿತಾರವರು ಸ್ಪಂದಿಸುತ್ತಿಲ್ಲವೆಂದು ಹೇಳಲಾಗಿದೆ.

ಅವರ ಆರೋಗ್ಯ ಸ್ಥಿತಿ ಕ್ಷಣಕ್ಷಣಕ್ಕೂ ಬಿಗಡಾಯಿಸುತ್ತಿದ್ದು, ಕೋಮಾ ಸ್ಥಿತಿಗೆ ಜಯಲಲಿತಾ ಹೋಗಿದ್ದಾರೆನ್ನಲಾಗಿದೆ. ತುರ್ತು ಚಿಕಿತ್ಸಾ ನಿಗಾ ಘಟಕದಲ್ಲಿ ಇಸಿಎಂಓ ಚಿಕಿತ್ಸೆ ನೀಡಲಾಗುತ್ತಿದ್ದು, ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ ತಜ್ಞ ವೈದ್ಯರೂ ಚೆನ್ನೈಗೆ ಆಗಮಿಸಿ ಅಪೊಲೋ ಆಸ್ಪತ್ರೆ ವೈದ್ಯರೊಂದಿಗೆ ಸೇರಿ ಜಯಲಲಿತಾರಿಗೆ ಚಿಕಿತ್ಸೆ ನೀಡುತ್ತಿದ್ದಾರೆ.

ಜಯಲಲಿತಾರ ಆರೋಗ್ಯ ಸ್ಥಿತಿ ವಿಷಮಗೊಂಡಿರುವ ಸುದ್ದಿ ಪ್ರಕಟಗೊಳ್ಳುತ್ತಿದ್ದಂತೆಯೇ ಅವರು ಚಿಕಿತ್ಸೆ ಪಡೆಯುತ್ತಿರುವ ಅಪೊಲೋ ಆಸ್ಪತ್ರೆಗೆ ಭಾರೀ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುತ್ತಿದ್ದು, ಜನರನ್ನು ನಿಯಂತ್ರಿಸಲು ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...