alex Certify
ಕನ್ನಡ ದುನಿಯಾ       Mobile App
       

Kannada Duniya

ಬಾಂಬ್ ಬೆದರಿಕೆಗೆ ಕೆಳಗಿಳಿದ ವಿಮಾನ

jet-airways-story-fb_647_042016093717

ಇತ್ತೀಚೆಗೆ ಬಾಂಬ್ ಬೆದರಿಕೆ ಕರೆಗಳು ಹೆಚ್ಚುತ್ತಿದ್ದು, ಮುಂಬೈನಿಂದ ಅಹಮದಾಬಾದ್ ಗೆ ಹೊರಟಿದ್ದ ಜೆಟ್ ಏರ್ ವೇಸ್ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಘಟನೆ ನಡೆದಿದೆ.

ಹೌದು. ಮುಂಬೈನಿಂದ ಅಹಮದಾಬಾದ್ ಗೆ 125 ಪ್ರಯಾಣಿಕರು ಮತ್ತು 6 ವಿಮಾನ ಸಿಬ್ಬಂದಿಯೊಂದಿಗೆ ಪ್ರಯಾಣಿಸುತ್ತಿದ್ದ ಜೆಟ್ ಏರ್ ವೇಸ್ ವಿಮಾನದಲ್ಲಿ ಬಾಂಬ್ ಇದೆ ಎಂಬ ಬೆದರಿಕೆ ಕರೆ ಬಂದಿದೆ ಎನ್ನಲಾಗಿದ್ದು, ತಕ್ಷಣ ಅಲರ್ಟ್ ಆದ ಪೈಲಟ್ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದಾನೆ.

ವಿಮಾನ ಭೂಸ್ಪರ್ಶ ಮಾಡುತ್ತಿದ್ದಂತೆಯೇ ಪ್ರಯಾಣಿಕರನ್ನು ಕೆಳಗೆ ಇಳಿಸಿದ ಭದ್ರತಾ ಸಿಬ್ಬಂದಿಗಳು ಕೂಡಲೇ ವಿಮಾನದಲ್ಲಿ ಶೋಧಕಾರ್ಯ ನಡೆಸಿದ್ದು, ಪ್ರಯಾಣಿಕರ ಲಗೇಜುಗಳನ್ನು ತಪಾಸಣೆ ನಡೆಸಿದ್ದು, ಆದರೆ ಯಾವುದೇ ಅಂತಹ ವಸ್ತುಗಳು ಪತ್ತೆಯಾಗಿಲ್ಲ ಎನ್ನಲಾಗಿದೆ. ಅಂತಿಮವಾಗಿ ಇದೊಂದು ಹುಸಿ ಕರೆ ಎಂಬುದು ತಿಳಿದುಬಂದಿದ್ದು, ಮತ್ತೆ ವಿಮಾನ ಹಾರಾಟಕ್ಕೆ ಅನುವು ಮಾಡಿಕೊಡಲಾಯಿತು ಎಂಬ ಮಾಹಿತಿ ಲಭ್ಯವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...