alex Certify
ಕನ್ನಡ ದುನಿಯಾ       Mobile App
       

Kannada Duniya

ಪಟಾಕಿ ಕಾರ್ಖಾನೆಗೆ ಬೆಂಕಿ ತಗುಲಿ 8 ಮಂದಿ ಸಾವು

ರಾಂಚಿ: ಜಾರ್ಖಂಡ್ ನ ಕುಮಾರದುಭಿಯಲ್ಲಿ ನಡೆದ ಭೀಕರ ಅಗ್ನಿ ದುರಂತದಲ್ಲಿ 8 ಮಂದಿ ಸಾವು ಕಂಡಿದ್ದಾರೆ. ಅಕ್ರಮವಾಗಿ ನಡೆಯುತ್ತಿದ್ದ ಪಟಾಕಿ ಕಾರ್ಖಾನೆಗೆ ಬೆಂಕಿ ತಗುಲಿದ್ದು, 8 ಮಂದಿ ಮೃತಪಟ್ಟು, 25 ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ದೌಡಾಯಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

5 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆದಿದೆ. ಸೋಮವಾರ ಬೆಳಿಗ್ಗೆ ಪಟಾಕಿ ಕಾರ್ಖಾನೆಯಲ್ಲಿ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿದ್ದು, ಹಲವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...