alex Certify
ಕನ್ನಡ ದುನಿಯಾ       Mobile App
       

Kannada Duniya

ಗಡಿಯೊಳಕ್ಕೆ ನುಸುಳಿದ ಇಬ್ಬರು ಪಾಕ್ ಯೋಧರ ಹತ್ಯೆ

encounter_8754

ಜಮ್ಮು-ಕಾಶ್ಮೀರದಲ್ಲಿ ಪದೇ ಪದೇ ಕದನ ವಿರಾಮ ಉಲ್ಲಂಘಿಸುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತಿರುಗೇಟು ನೀಡಿದೆ. ರಜೌರಿ ಮತ್ತು ಪೂಂಛ್ ಜಿಲ್ಲೆಯಲ್ಲಿ ಅಕ್ರಮವಾಗಿ ಗಡಿಯೊಳಕ್ಕೆ ನುಸುಳಿದ ಇಬ್ಬರು ಪಾಕ್ ಯೋಧರನ್ನು ಹತ್ಯೆ ಮಾಡಿದೆ. ಅಲ್ಲಿನ ಜನನಿಬಿಡ ಸ್ಥಳಗಳಲ್ಲಿ ಪಾಕ್ ಸೇನೆ ಮೋಟಾರ್ ಬಾಂಬ್ ಗಳನ್ನು ಸ್ಫೋಟಿಸಲು ಆರಂಭಿಸಿತ್ತು.

ಆಟೋಮ್ಯಾಟಿಕ್ ಶಸ್ತ್ರಾಸ್ತ್ರಗಳ ಮೂಲಕ ದಾಳಿ ನಡೆಸಿತ್ತು. ಕಳೆದ ನಾಲ್ಕು ದಿನಗಳಲ್ಲಿ ಪಾಕಿಸ್ತಾನ 14 ಬಾರಿ ಕದನ ವಿರಾಮವನ್ನು ಉಲ್ಲಂಘಿಸಿದೆ. ಈ ದಾಳಿಯಲ್ಲಿ ಓರ್ವ ನಾಗರಿಕ ಮೃತಪಟ್ಟಿದ್ದು, 7 ಮಂದಿ ಗಾಯಗೊಂಡಿದ್ದಾರೆ.

ನಿನ್ನೆ ಸಹ ಕಾಶ್ಮೀರದಲ್ಲಿ ಭಯೋತ್ಪಾದಕರು 7 ಬಾರಿ ಗ್ರೆನೇಡ್ ದಾಳಿ ನಡೆಸಿದ್ದಾರೆ. ಈ ಘಟನೆಯಲ್ಲಿ 14 ಪೊಲೀಸರು ಗಾಯಗೊಂಡಿದ್ದಾರೆ. ಪ್ರತಿದಾಳಿ ನಡೆಸಿದ ಭಾರತೀಯ ಯೋಧರು ಇಬ್ಬರು ಪಾಕ್ ಸೈನಿಕರನ್ನು ಹೊಡೆದುರುಳಿಸಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...