alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್! ಶಾಸಕನಿಗೆ ಬೆದರಿಕೆ ಹಾಕಿ ಹಣ ವಸೂಲಿ ಮಾಡಿದ ವಿದ್ಯಾರ್ಥಿನಿ

ಮಧ್ಯ ಪ್ರದೇಶದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಪತ್ರಿಕೋದ್ಯಮ ವ್ಯಾಸಂಗ ಮಾಡುತ್ತಿದ್ದ 21 ವರ್ಷದ ವಿದ್ಯಾರ್ಥಿನಿಯೊಬ್ಬಳು ಶಾಸಕನ ವಿರುದ್ದ ರೇಪ್ ಕೇಸ್ ದಾಖಲಿಸುವುದಾಗಿ ಬೆದರಿಸಿ 2 ಕೋಟಿ ರೂ. ವಸೂಲಿ ಮಾಡಲು ಯತ್ನಿಸಿ ಸಿಕ್ಕಿ ಬಿದ್ದಿದ್ದಾಳೆ.

ತಾನು ಪತ್ರಕರ್ತೆಎಂದು ಹೇಳಿಕೊಂಡು ಬಿಂಡ್ ಜಿಲ್ಲೆಯ ಅತೇರ್ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೇಮಂತ್ ಕಟಾರೆಯವರನ್ನು ಹಲವು ಬಾರಿ ಸಂಪರ್ಕಿಸಿದ್ದ ಯುವತಿ, ಬಳಿಕ ತನ್ನ ಸ್ನೇಹಿತ ವಿಕ್ರಮ್ಜಿತ್ ಸಿಂಗ್ ಎಂಬಾತನ ಮೂಲಕ 2 ಕೋಟಿ ರೂ. ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾಳೆ.

ಹಣ ನೀಡದಿದ್ದಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದು, ಕಡೆಗೆ 25 ಲಕ್ಷ ರೂ. ನೀಡಲು ಶಾಸಕ ಹೇಮಂತ್ ಸಮ್ಮತಿಸಿದ್ದಾರೆ. ಇದಾದ ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದು, ಬುಧವಾರದಂದು ಮುಂಗಡ ಹಣ 5 ಲಕ್ಷ ರೂ. ಗಳನ್ನು ಪಡೆಯಲು ಯುವತಿ ಬಂದ ವೇಳೆ ಅಪರಾಧ ವಿಭಾಗದ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಆಕೆಯ ಸಹವರ್ತಿ ವಿಕ್ರಮ್ಜಿತ್ ಪರಾರಿಯಾಗಿದ್ದು, ಆತನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ. ಯುವತಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...