alex Certify
ಕನ್ನಡ ದುನಿಯಾ       Mobile App
       

Kannada Duniya

ಗುಂಡಿನ ದಾಳಿಯಲ್ಲಿ ಮತ್ತೊಬ್ಬ ಪತ್ರಕರ್ತನ ಹತ್ಯೆ

ಕಾನ್ಪುರ: ಗುಂಡು ಹಾರಿಸಿ ಪತ್ರಕರ್ತರೊಬ್ಬರನ್ನು ಹತ್ಯೆಗೈದ ಘಟನೆ, ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯ ಬಿಲ್ಹಾರ್ ನಲ್ಲಿ ನಡೆದಿದೆ.

48 ವರ್ಷದ ನವೀನ್ ಹತ್ಯೆಯಾದ ಪತ್ರಕರ್ತ ಎಂಬ ಮಾಹಿತಿ ಲಭ್ಯವಾಗಿದೆ. ಬೈಕ್ ನಲ್ಲಿ ಬಂದಿದ್ದ ದುಷ್ಕರ್ಮಿಗಳು ನವೀನ್ ಅವರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡ ನವೀನ್ ರನ್ನು ಆಸ್ಪತ್ರೆಗೆ ಸೇರಿಸಿದರೂ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಕಳೆದ ವಾರವಷ್ಟೇ ತ್ರಿಪುರಾದ ಆರ್.ಕೆ. ನಗರದ ಸೇನಾ ನೆಲೆಯಲ್ಲಿ ಪತ್ರಕರ್ತರೊಬ್ಬರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿತ್ತು. ಸೆಪ್ಟಂಬರ್ 5 ರಂದು ಬೆಂಗಳೂರಿನಲ್ಲಿ ಖ್ಯಾತ ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ್ದರು.

ಈಗ ಮತ್ತೊಬ್ಬ ಪತ್ರಕರ್ತ ನವೀನ್ ಹತ್ಯೆಯಾಗಿದೆ. ನವೀನ್ ಮೇಲೆ ಗುಂಡು ಹಾರಿಸಿದ ದುಷ್ಕರ್ಮಿಗಳ ಬಂಧನಕ್ಕೆ ಪೊಲೀಸರು ಶೋಧ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...