alex Certify
ಕನ್ನಡ ದುನಿಯಾ       Mobile App
       

Kannada Duniya

ವೈದ್ಯಕೀಯ ಪರೀಕ್ಷೆಗೊಳಪಡಲು ಜಸ್ಟೀಸ್ ಕರ್ಣನ್ ನಿರಾಕರಣೆ

justice-c-s-karnanಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಕೋಲ್ಕತ್ತಾ ಆಸ್ಪತ್ರೆಯ ವೈದ್ಯರ ತಂಡ ಪೊಲೀಸ್ ಬೆಂಗಾವಲಿನಲ್ಲಿ ಕೋಲ್ಕತ್ತಾ ಹೈಕೋರ್ಟ್ ನ್ಯಾಯಾಧೀಶ ಸಿ.ಎಸ್. ಕರ್ಣನ್ ರ ಮಾನಸಿಕ ಸ್ಥಿತಿ ಕುರಿತು ಪರೀಕ್ಷೆ ನಡೆಸಲು ಅವರ ನಿವಾಸಕ್ಕೆ ತೆರಳಿದ್ದ ವೇಳೆ ನಾಟಕೀಯ ಬೆಳವಣಿಗೆ ನಡೆದಿದೆ.

ಮಾನಸಿಕ ಪರೀಕ್ಷೆಗೊಳಪಡಲು ಸಿ.ಎಸ್. ಕರ್ಣನ್ ನಿರಾಕರಿಸಿದ್ದಾರಲ್ಲದೇ ಸುಪ್ರೀಂ ಕೋರ್ಟ್ ನ್ಯಾಯಾಧೀಶರುಗಳ ವಿರುದ್ದವೇ ಆರೋಪ ಮಾಡಿದ್ದಾರೆ. ತಮ್ಮ ಮಾನಸಿಕ ಸ್ಥಿತಿ ಸರಿಯಿದೆ. ತಾವು ಯಾವುದೇ ಕಾರಣಕ್ಕೂ ವೈದ್ಯಕೀಯ ಪರೀಕ್ಷೆಗೊಳಪಡುವುದಿಲ್ಲವೆಂದು ಆಗಮಿಸಿದ್ದ ವೈದ್ಯರ ತಂಡಕ್ಕೆ ಸ್ಪಷ್ಟವಾಗಿ ಹೇಳಿದ್ದಾರೆನ್ನಲಾಗಿದೆ.

ಜಸ್ಟೀಸ್ ಕರ್ಣನ್ ಯಾವುದೇ ಕಾರ್ಯ ನಿರ್ವಹಿಸದಂತೆ ಕೋಲ್ಕತ್ತಾ ಹೈಕೋರ್ಟ್ ರಿಜಿಸ್ಟ್ರಾರ್ ಗೆ ಸುಪ್ರೀಂ ಕೋರ್ಟ್ ಈಗಾಗಲೇ ನಿರ್ದೇಶನ ನೀಡಿದ್ದು, ಇದಕ್ಕೆ ತಿರುಗಿ ಬಿದ್ದಿರುವ ಕರ್ಣನ್, ಸುಪ್ರೀಂ ಕೋರ್ಟ್ ನ್ಯಾಯಾಧೀಶರುಗಳ ವಿರುದ್ದವೇ ಜಾಮೀನುರಹಿತ ಬಂಧನ ವಾರಂಟ್ ಹೊರಡಿಸಿದ್ದರು. ಅವರ ಮಾನಸಿಕ ಸ್ಥಿತಿ ಕುರಿತು ಪರೀಕ್ಷೆ ನಡೆಸುವಂತೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಆದೇಶ ಹೊರಡಿಸಿದ್ದು, ಮೇ 8 ರೊಳಗೆ ವರದಿ ಸಲ್ಲಿಸುವಂತೆ ಸೂಚಿಸಿದ್ದರು. ಆದರೆ ಇದೀಗ ಜಸ್ಟೀಸ್ ಕರ್ಣನ್ ವೈದ್ಯಕೀಯ ಪರೀಕ್ಷೆಗೊಳಪಡಲು ನಿರಾಕರಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...