alex Certify
ಕನ್ನಡ ದುನಿಯಾ       Mobile App
       

Kannada Duniya

UP ಯಲ್ಲಿ ಮತ್ತೊಂದು ರೈಲು ದುರಂತ

ಲಖ್ನೋ: ಉತ್ತರ ಪ್ರದೇಶದಲ್ಲಿ ಮತ್ತೊಂದು ರೈಲು ಹಳಿತಪ್ಪಿದೆ. ಔರೈಯಾ ಜಿಲ್ಲೆಯಲ್ಲಿ ಬೆಳಗಿನ ಜಾವ 2.40 ರ ಸುಮಾರಿಗೆ ಕೈಫಿಯತ್ ಎಕ್ಸ್ ಪ್ರೆಸ್ ರೈಲಿನ ಬೋಗಿಗಳು ಹಳಿ ತಪ್ಪಿವೆ.

ಆಜಂಗಢದಿಂದ ನವದೆಹಲಿಗೆ ಸಂಚರಿಸುತ್ತಿದ್ದ ರೈಲು ಮಾನವರಹಿತ ಕ್ರಾಸಿಂಗ್ ನಲ್ಲಿ ಡಂಪಿಂಗ್ ಗೆ ಡಿಕ್ಕಿಯಾಗಿದ್ದು, ರೈಲಿನ ಇಂಜಿನ್ ಸೇರಿ 10 ಬೋಗಿಗಳು ಹಳಿ ತಪ್ಪಿವೆ.

ಪ್ರಾಥಮಿಕ ಮಾಹಿತಿಗಳ ಪ್ರಕಾರ, 50 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಗಾಯಾಳುಗಳಲ್ಲಿ ಅನೇಕರ ಸ್ಥಿತಿ ಗಂಭೀರವಾಗಿದೆ. ಸ್ಥಳಕ್ಕೆ ವೈದ್ಯರು, ರೈಲ್ವೇ ಇಲಾಖೆ ಅಧಿಕಾರಿಗಳು ಹಾಗೂ ರಕ್ಷಣಾ ಸಿಬ್ಬಂದಿ ಧಾವಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...