alex Certify
ಕನ್ನಡ ದುನಿಯಾ       Mobile App
       

Kannada Duniya

ಮುಖ್ಯಮಂತ್ರಿಗಳ ಭೇಟಿ ಬಳಿಕ ಕಮಲಹಾಸನ್ ಹೇಳಿದ್ದೇನು?

ಖ್ಯಾತ ನಟ ಕಮಲಹಾಸನ್ ಬೆಂಗಳೂರಿನಲ್ಲಿ ಇಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿದ್ದರು.

ಕುಮಾರಸ್ವಾಮಿಯವರನ್ನು ಭೇಟಿಯಾದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕಮಲಹಾಸನ್, ತಾವು ತಮಿಳುನಾಡು ರೈತರ ಪರವಾಗಿ ಇಲ್ಲಿಗೆ ಬಂದಿದ್ದೇನೆ. ಕುರುವೈ ಬೆಳೆಗೆ ಕಾವೇರಿ ನೀರು ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

ಕುಮಾರಸ್ವಾಮಿಯವರೊಂದಿಗಿನ ಭೇಟಿ ಸಂದರ್ಭದಲ್ಲಿ ‘ಕಾಲಾ’ ಚಿತ್ರದ ಕುರಿತು ತಾವು ಚರ್ಚಿಸಿಲ್ಲ. ಎರಡೂ ರಾಜ್ಯಗಳ ರೈತರ ಹಿತಾಸಕ್ತಿ ಮುಖ್ಯವಾಗಿದ್ದು, ಕಾವೇರಿ ವಿವಾದ ಸೌಹಾರ್ದಯುತವಾಗಿ ಬಗೆಹರಿಸಲು ಉಭಯ ರಾಜ್ಯಗಳು ಒಂದಾಗಬೇಕಿದೆ ಎಂದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...