alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಜೆಪಿ ಆಡಳಿತ ಅಂತ್ಯ ಕೋರಿ ದೇವರ ಮೊರೆ ಹೋದ ಕಾಂಗ್ರೆಸ್ ನಾಯಕ

ಮಧ್ಯಪ್ರದೇಶದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯ ದುರಾಡಳಿತವನ್ನು ಅಂತ್ಯಗೊಳಿಸಲು ಆಶೀರ್ವದಿಸುವಂತೆ ಕೋರಿ ಕಾಂಗ್ರೆಸ್ ನಾಯಕರೊಬ್ಬರು ದೇವರ ಮೊರೆ ಹೋಗಿದ್ದಾರೆ.

ಮಧ್ಯ ಪ್ರದೇಶ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿರುವ ಕಮಲ್ ನಾಥ್, ಈ ಕುರಿತಂತೆ ಶಿವನ ಮತ್ತೊಂದು ರೂಪವಾಗಿರುವ ಮಹಾಕಾಳೇಶ್ವರನಿಗೆ ಬಹಿರಂಗ ಪತ್ರ ಬರೆದಿದ್ದಾರೆ.

ಕಳೆದ ಹದಿನೈದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿಯ ಅಧಿಕಾರವಧಿಯಲ್ಲಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಬಾಲಕಿಯರ ಮೇಲೆ ಅತ್ಯಾಚಾರಗಳು ನಡೆದಿವೆ ಎಂಬ ಮೊದಲಾದ ಅಂಶಗಳನ್ನು ತಮ್ಮ ಪತ್ರದಲ್ಲಿ ಉಲ್ಲೇಖಿಸಿರುವ ಕಮಲ್ ನಾಥ್ ರ ಮೊರೆಗೆ ಮಹಾಕಾಳೇಶ್ವರ ಯಾವ ರೀತಿ ಸ್ಪಂದಿಸುತ್ತಾನೆಂಬುದನ್ನು ಕಾದು ನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...