alex Certify
ಕನ್ನಡ ದುನಿಯಾ       Mobile App
       

Kannada Duniya

ಕನ್ಹಯ್ಯ ಕುಮಾರ್ ಭಾಷಣಕ್ಕೆ ತಲೆದೂಗಿದ ಕೇಜ್ರಿವಾಲ್

arvind-kejriwal_647_022616070456

ಜೆ ಎನ್ ಯು ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೊಳಗಾಗಿ ಜೈಲಿನಿಂದ ಬಿಡುಗಡೆಯಾಗಿ ಮೊದಲ ಬಾರಿಗೆ ವಿವಿ ಆವರಣದಲ್ಲಿ ಮಾತನಾಡಿರುವ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ಅವರ ಭಾಷಣಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತಲೆದೂಗಿದ್ದಾರೆ.

ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ವಿವಿ ಆವರಣದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಕನ್ಹಯ್ಯ ಕುಮಾರ್ ಮಾತನಾಡಿದ್ದರು. ಈ ಭಾಷಣಕ್ಕೆ ಟ್ವಿಟರ್ ನಲ್ಲಿ ಮೆಚ್ಚುಗೆ ವ್ಯಕ್ತಪಡಿಸಿರುವ ಕೇಜ್ರಿವಾಲ್ ಅವರು, ವಿವಿ ಆವರಣದಲ್ಲಿ ಕನ್ಹಯ್ಯ ಕುಮಾರ್ ಮಾಡಿರುವ ಭಾಷಣ ನಿಜಕ್ಕೂ ಅದ್ಭುತವಾಗಿದೆ ಎಂದು ಪ್ರಶಂಸಿಸಿದ್ದಾರೆ.

ವಿಶೇಷವೆಂದರೆ ದೇಶದ್ರೋಹ ಆರೋಪದಲ್ಲಿ ಜೈಲು ಸೇರಿದ್ದ ಜೆ ಎನ್ ಯು ವಿದ್ಯಾರ್ಥಿ ಸಂಘದ ನಾಯಕ ಕನ್ಹಯ್ಯ ಕುಮಾರ್ ನಿನ್ನೆಯಷ್ಟೇ ಬಿಡುಗಡೆಗೊಂಡಿದ್ದರು. ಅಲ್ಲದೇ ದೆಹಲಿ ಸರ್ಕಾರದ ತನಿಖಾ ತಂಡ ಸಹ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ಹಯ್ಯ ಕುಮಾರ್ ಗೆ ಕ್ಲೀನ್ ಚಿಟ್ ನೀಡಿತ್ತು. ಅದಾದ ನಂತರ ವಿವಿಯ ಆವರಣದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ್ದ ಕನ್ಹಯ್ಯ ಕುಮಾರ್, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿಯ ವೈಖರಿಯನ್ನು ತರಾಟೆಗೆ ತೆಗೆದುಕೊಂಡಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...