alex Certify
ಕನ್ನಡ ದುನಿಯಾ       Mobile App
       

Kannada Duniya

ಆಯೋಗಕ್ಕೂ ಮುನ್ನವೇ ಮತದಾನದ ದಿನಾಂಕ ಪ್ರಕಟಿಸಿದ್ದ ಅಮಿತ್ ಮಾಳವೀಯ ಹೇಳಿದ್ದೇನು?

ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಕ್ರಿಯೆಗಳ ಕುರಿತು ಕೇಂದ್ರ ಚುನಾವಣಾ ಆಯೋಗದ ಆಯುಕ್ತ ಒ.ಪಿ. ರಾವತ್ ಮಂಗಳವಾರದಂದು ಕರೆಯಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದ್ದಾರೆ.

ಮೇ 12 ರ ಶನಿವಾರದಂದು ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದ್ದು, ಮೇ 15 ರ ಮಂಗಳವಾರದಂದು ಫಲಿತಾಂಶ ಹೊರ ಬೀಳಲಿದೆ. ಚುನಾವಣಾ ದಿನಾಂಕ ಪ್ರಕಟವಾದ ಮಾರ್ಚ್ 27 ರ ಮಂಗಳವಾರದಿಂದಲೇ ನೀತಿ ಸಂಹಿತೆ ಜಾರಿಗೆ ಬಂದಿದೆ.

ಈ ಮಧ್ಯೆ ಕೇಂದ್ರ ಚುನಾವಣಾ ಆಯುಕ್ತ ಒ.ಪಿ. ರಾವತ್ ಚುನಾವಣಾ ದಿನಾಂಕ ಘೋಷಿಸುವ ಮುನ್ನವೇ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ತಮ್ಮ ಟ್ವೀಟರ್ ಖಾತೆಯಲ್ಲಿ ಮತದಾನದ ದಿನಾಂಕವನ್ನು ಘೋಷಿಸಿದ್ದು, ವಿವಾದಕ್ಕೆ ಕಾರಣವಾಗಿತ್ತು.

ಮೇ 12 ರಂದು ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತದಾನ ಹಾಗೂ ಮೇ 18 ರಂದು ಮತ ಎಣಿಕೆ ಎಂದು ಅಮಿತ್ ಮಾಳವೀಯ ಟ್ವೀಟ್ ಮಾಡಿದ್ದು, ಚುನಾವಣೆ ದಿನಾಂಕ ಅಧಿಕೃತ ಘೋಷಣೆಗೂ ಮುನ್ನವೇ ಅಮಿತ್ ಮಾಳವೀಯರಿಗೆ ಮತದಾನದ ದಿನಾಂಕ ಲಭ್ಯವಾಗಿದ್ದು ಹೇಗೆ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿತ್ತು.

ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದ ಚುನಾವಣಾ ಆಯೋಗ ತನಿಖೆ ನಡೆಸಲು ಸಮಿತಿ ರಚಿಸಿದ್ದು, ಈಗ ಅಮಿತ್ ಮಾಳವೀಯ ಸ್ಪಷ್ಟನೆ ನೀಡಿದ್ದಾರೆನ್ನಲಾಗಿದೆ. ಸುದ್ದಿ ವಾಹಿನಿಯೊಂದರ ಮಾಹಿತಿಯನ್ನಾಧರಿಸಿ ಈ ಟ್ವೀಟ್ ಮಾಡಿದ್ದಾಗಿ ಅಮಿತ್ ಮಾಳವೀಯ ಹೇಳಿದ್ದು, ಈಗ ಸುದ್ದಿ ವಾಹಿನಿಗೆ ಮಾಹಿತಿ ಲಭ್ಯವಾಗಿದ್ದು ಹೇಗೆ ಎಂಬುದರ ಕುರಿತು ತನಿಖೆ ನಡೆಯಲಿದೆ ಎಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...