alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಗ್ ಬ್ರೇಕಿಂಗ್: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟ

ನವದೆಹಲಿ : ರಾಜ್ಯ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕವನ್ನು ಪ್ರಕಟಿಸಲಾಗಿದೆ. ಮೇ 12 ರಂದು ಮತದಾನ ನಡೆಯಲಿದೆ. ಮೇ 28 ಕ್ಕೆ 224 ಸದಸ್ಯರ ಪ್ರಸಕ್ತ ವಿಧಾನಸಭೆಯ ಅವಧಿ ಮುಕ್ತಾಯವಾಗಲಿದ್ದು, ಅಷ್ಟರೊಳಗೆ ಹೊಸ ಸರ್ಕಾರ ಅಧಿಕಾರಕ್ಕೆ ಬರಲಿದೆ.

ದೆಹಲಿಯಲ್ಲಿ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಒ.ಪಿ. ರಾವತ್ ಚುನಾವಣೆ ದಿನಾಂಕವನ್ನು ಘೋಷಿಸಿದ್ದು, ಇದರ ಬೆನ್ನಲ್ಲೇ ನೀತಿ ಸಂಹಿತೆ ಜಾರಿಗೆ ಬಂದಿದೆ.

ರಾಜ್ಯ ಚುನಾವಣಾ ಆಯೋಗ ಈಗಾಗಲೇ ಸಕಲ ತಯಾರಿಗಳನ್ನು ಮಾಡಿಕೊಂಡಿದೆ. ಮತಗಟ್ಟೆ ಸಿಬ್ಬಂದಿ, ಅಧಿಕಾರಿಗಳಿಗೆ ಕಾರ್ಯಾಗಾರ ನಡೆಸಲಾಗಿದೆ. ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣಾಧಿಕಾರಿಗಳನ್ನು ನೇಮಿಸಲಾಗಿದೆ. ಎಲ್ಲಾ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದುಕೊಂಡ ಕೇಂದ್ರ ಚುನಾವಣಾ ಆಯೋಗ ಇಂದು ದಿನಾಂಕವನ್ನು ಪ್ರಕಟಿಸಿದೆ. ಮೇ 12 ಶನಿವಾರ ಮತದಾನ ನಡೆಯಲಿದ್ದರೆ ಮೇ 15 ರ ಮಂಗಳವಾರದಂದು ಫಲಿತಾಂಶ ಹೊರ ಬೀಳಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...