alex Certify
ಕನ್ನಡ ದುನಿಯಾ       Mobile App
       

Kannada Duniya

ಕರ್ನಾಟಕದಲ್ಲಿಯೂ ಶುರುವಾಗಲಿದೆ ‘ಟೆಂಪಲ್ ರನ್’…!

ಕರ್ನಾಟಕ ವಿಧಾನ ಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಈಗಾಗಲೇ ಪ್ರಚಾರ ಕಾರ್ಯ ಆರಂಭಿಸಿವೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜ್ಯದಲ್ಲಿ ತಮ್ಮ ಸರ್ಕಾರ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ರಾಜ್ಯಾದ್ಯಂತ ಸಮಾವೇಶವನ್ನು ನಡೆಸುತ್ತಿದ್ದು, ಅತ್ತ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಯಡಿಯೂರಪ್ಪ ಪರಿವರ್ತನಾ ಯಾತ್ರೆ ನಡೆಸುತ್ತಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರೂ ಸಹ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದಾರೆ.

ಈ ಮಧ್ಯೆ ಗುಜರಾತ್ ಚುನಾವಣೆ ವೇಳೆ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ದೇವಾಲಯಗಳಿಗೆ ಭೇಟಿ ನೀಡಿದ ವಿಚಾರ ಫಲಿತಾಂಶದಲ್ಲಿ ಪರಿಣಾಮ ಬೀರಿರುವುದರಿಂದ ಕರ್ನಾಟಕ ಪ್ರವಾಸ ಸಂದರ್ಭದಲ್ಲೂ ದೇವಾಲಯ ಹಾಗೂ ಮಠಗಳಿಗೆ ಭೇಟಿ ನೀಡಲಿದ್ದಾರೆನ್ನಲಾಗಿದೆ. ಉಡುಪಿ ಶ್ರೀ ಕೃಷ್ಣ ಮಠ, ಆದಿಚುಂಚನಗಿರಿ ಮಠ, ತುಮಕೂರಿನ ಸಿದ್ಧಗಂಗಾ ಮಠ ಹಾಗೂ ಸುತ್ತೂರು ಮಠಗಳಿಗೆ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆನ್ನಲಾಗಿದ್ದು, ಪ್ರದಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕೂಡ ತಮ್ಮ ಪ್ರವಾಸ ಸಂದರ್ಭದಲ್ಲಿ ರಾಜ್ಯದ ಮಠ-ಮಂದಿರಗಳಿಗೆ ಭೇಟಿ ನೀಡುವ ಸಾಧ್ಯತೆ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...