alex Certify
ಕನ್ನಡ ದುನಿಯಾ       Mobile App
       

Kannada Duniya

ಭಾರೀ ದುಬಾರಿ ಚುನಾವಣೆ: ದಂಗಾಗುವಂತಿದೆ ಖರ್ಚಾದ ಹಣದ ಲೆಕ್ಕ

ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯನ್ನು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಸಲು ಚುನಾವಣಾ ಆಯೋಗ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿತ್ತು. ಎಲ್ಲೆಡೆ ಹದ್ದಿನ ಕಣ್ಣಿಟ್ಟು ಅಪಾರ ಪ್ರಮಾಣದ ಹಣ, ಇತರೆ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಇದರ ಮೊತ್ತವೇ ನೂರಾರು ಕೋಟಿಯಷ್ಟಿದೆ.

ಇದೆಲ್ಲವನ್ನು ಮೀರಿ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಅತಿಹೆಚ್ಚು ಹಣವನ್ನು ಖರ್ಚು ಮಾಡಲಾಗಿದೆ. ಇಡೀ ದೇಶದಲ್ಲಿಯೇ ಯಾವ ರಾಜ್ಯಗಳಲ್ಲಿಯೂ ಇಷ್ಟೊಂದು ಹಣವನ್ನು ಖರ್ಚು ಮಾಡಿಲ್ಲ. ಕರ್ನಾಟಕದ ವಿಧಾನಸಭೆ ಚುನಾವಣೆಯಲ್ಲಿ ಬರೋಬ್ಬರಿ 9500 ಕೋಟಿ ರೂ.ನಿಂದ 10,500 ಕೋಟಿ ರೂ. ನಷ್ಟು ಹಣವನ್ನು ಖರ್ಚು ಮಾಡಲಾಗಿದೆ.

ಕಳೆದ 20 ವರ್ಷಗಳಿಂದ ಚುನಾವಣೆಗಳಲ್ಲಿ ಹಣದ ಖರ್ಚು, ವೆಚ್ಚದ ಬಗ್ಗೆ ಸಮೀಕ್ಷೆ ನಡೆಸಿರುವ ಸೆಂಟರ್ ಫಾರ್ ಮೀಡಿಯಾ ಸರ್ವಿಸ್(ಸಿ.ಎಂ.ಎಸ್.) ಸಂಸ್ಥೆ ಈ ಮಾಹಿತಿಯನ್ನು ನೀಡಿದೆ. 2013 ರಲ್ಲಿ ನಡೆದ ವಿಧಾನಸಭೆ ಚುನಾವಣೆಗಿಂತ ಈ ಬಾರಿಯ ಚುನಾವಣೆಯಲ್ಲಿ ಖರ್ಚು ಮಾಡಲಾದ ಹಣ 2 ಪಟ್ಟು ಹೆಚ್ಚಾಗಿದೆ. ಇನ್ನು ಈ ಸಮೀಕ್ಷೆಯಲ್ಲಿ ಪ್ರಧಾನಿ ಪ್ರಚಾರಕ್ಕೆ ಬಳಸಿದ ಖರ್ಚನ್ನು ಸೇರಿಸಲಾಗಿಲ್ಲ. ಸುಮಾರು 11,000 ಕೋಟಿ ರೂ. ನಷ್ಟು ಹಣವನ್ನು ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಈ ಚುನಾವಣೆಯಲ್ಲಿ ಖರ್ಚು ಮಾಡಿದ್ದಾರೆ ಎಂದು ಅಂದಾಜಿಸಲಾಗಿದೆ.

ವಿಧಾನಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಹಣವನ್ನು ಖರ್ಚು ಮಾಡುವ ರಾಜ್ಯಗಳಲ್ಲಿ ಆಂಧ್ರಪ್ರದೇಶ, ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳಿವೆ. ಈ ಬಾರಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ದೇಶದಲ್ಲಿಯೇ ಅತಿಹೆಚ್ಚು ಹಣವನ್ನು ಖರ್ಚು ಮಾಡಲಾಗಿದೆ.

ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಇಷ್ಟೊಂದು ಪ್ರಮಾಣದಲ್ಲಿ ಹಣವನ್ನು ಖರ್ಚು ಮಾಡಿವೆ. ಇನ್ನು ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಇದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಹಣ ಖರ್ಚು ಮಾಡುವ ಸಾಧ್ಯತೆ ಇದೆ ಎಂದು ಸಿ.ಎಂ.ಎಸ್. ಸಂಸ್ಥೆಯ ಎನ್. ಭಾಸ್ಕರರಾವ್ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...