alex Certify
ಕನ್ನಡ ದುನಿಯಾ       Mobile App
       

Kannada Duniya

ಹೈದ್ರಾಬಾದ್ ನ ಪಾರ್ಕ್ ಹಯಾತ್ ಹೋಟೆಲ್ ತಲುಪಿದ ಕಾಂಗ್ರೆಸ್-ಜೆಡಿಎಸ್ ಶಾಸಕರು

ಮುಖ್ಯಮಂತ್ರಿಯಾಗಿ ಯಡಿಯೂರಪ್ಪನವರು ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆಯೇ ರೆಸಾರ್ಟ್ ಹಾಗೂ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ಈಗ ಹೈದರಾಬಾದ್ ಗೆ ಸ್ಥಳಾಂತರಗೊಂಡಿದ್ದಾರೆ.

ಹೈದರಾಬಾದ್ ನ ಬಂಜಾರಾ ಹಿಲ್ಸ್ ನಲ್ಲಿರುವ ಪಾರ್ಕ್ ಹಯಾತ್ ಹೋಟೆಲ್ ಗೆ ಉಭಯ ಪಕ್ಷಗಳ ಶಾಸಕರು ತೆರಳಿದ್ದು, ಬಹುಮತ ಸಾಬೀತುಪಡಿಸುವ ದಿನಾಂಕದವರೆಗೂ ಅಲ್ಲಿಯೇ ವಾಸ್ತವ್ಯ ಹೂಡುವ ಸಾಧ್ಯತೆಯಿದೆ.

ಬಹುಮತಕ್ಕಾಗಿ ಬಿಜೆಪಿ, ತಮ್ಮ ಪಕ್ಷದ ಶಾಸಕರನ್ನು ಸೆಳೆಯಬಹುದೆಂಬ ಆತಂಕದಲ್ಲಿರುವ ಕಾಂಗ್ರೆಸ್ ನಾಯಕರು ಇದುವರೆಗೂ ಅವರುಗಳನ್ನು ರಾಮನಗರ ತಾಲೂಕಿನ ಬಿಡದಿ ಬಳಿಯ ಈಗಲ್ಟನ್ ರೆಸಾರ್ಟ್ ನಲ್ಲಿರಿಸಿದ್ದರೆ, ಜೆಡಿಎಸ್ ಶಾಸಕರು ಶಾಂಗ್ರಿಲಾ ಹೋಟೆಲ್ ನಲ್ಲಿ ತಂಗಿದ್ದರು.

ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ಬೆಂಗಳೂರಿನಲ್ಲಿದ್ದರೆ ಶಾಸಕರ ಮೇಲೆ ಒತ್ತಡ ಹೆಚ್ಚಬಹುದೆಂಬ ಕಾರಣಕ್ಕೆ ಹೊರ ರಾಜ್ಯಕ್ಕೆ ತೆರಳಲು ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ತೀರ್ಮಾನಿಸಿದ್ದು, ಅದರಂತೆ ಉಭಯ ಪಕ್ಷಗಳ ಶಾಸಕರನ್ನು ಈಗ ಹೈದರಾಬಾದ್ ಗೆ ಕಳುಹಿಸಲಾಗಿದೆ.

ಬಸ್ ಹಾಗೂ ಐಷಾರಾಮಿ ಕಾರ್ ಗಳಲ್ಲಿ ಶಾಸಕರುಗಳು ತೆರಳಿದ್ದು, ಇವರುಗಳ ಬೆಂಗಾವಲಿಗೆ ಬೌನ್ಸರ್ಸ್ ಹಾಗೂ ಗನ್ ಮ್ಯಾನ್ ಗಳನ್ನು ನೇಮಿಸಲಾಗಿದೆ ಎಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...