alex Certify
ಕನ್ನಡ ದುನಿಯಾ       Mobile App
       

Kannada Duniya

ತೆಲಂಗಾಣದಲ್ಲಿ ‘ಸಿದ್ಧು’ ಸರ್ಕಾರದ ಹೊಗಳಿಕೆ

cm-kar

ಹೈದರಾಬಾದ್: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೈಗೊಂಡಿರುವ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ತೆಲಂಗಾಣ ವಿಧಾನಸಭೆಯಲ್ಲಿ ಮೆಚ್ಚುಗೆ ವ್ಯಕ್ತಪಡಿಸಲಾಗಿದೆ.

ತೆಲಂಗಾಣ ಪ್ರತಿಪಕ್ಷ ಶಾಸಕ ಉತ್ತಮ್ ಕುಮಾರ್ ರೆಡ್ಡಿ ನಮಗೆ ಕರ್ನಾಟಕ ಮಾದರಿಯಾಗಬೇಕು. ಅಲ್ಲಿ ರೈತರ ಅನುಕೂಲಕ್ಕಾಗಿ ಹಲವು ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ. ನಮ್ಮಲ್ಲಿಯೂ ಅಂತಹ ಯೋಜನೆ ರೂಪಿಸಬೇಕೆಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಕೆ. ಚಂದ್ರಶೇಖರರಾವ್, ಕರ್ನಾಟಕದಲ್ಲಿ ಬರಗಾಲ, ವಿದ್ಯುತ್ ಸಮಸ್ಯೆ ಇದೆ ಎಂದು ಹೇಳಲು ಮುಂದಾದರೂ ನಂತರದಲ್ಲಿ ಕರ್ನಾಟಕದ ಯೋಜನೆಗಳ ಬಗ್ಗೆ ತಿಳಿದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಕೃಷಿ ಸಚಿವರ ನೇತೃತ್ವದಲ್ಲಿ ಬೆಂಗಳೂರಿಗೆ ನಿಯೋಗ ಕಳುಹಿಸಿ, ರೈತರಿಗಾಗಿ ಕರ್ನಾಟಕ ಸರ್ಕಾರ ಕೈಗೊಂಡ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆಯುವುದಾಗಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...