alex Certify
ಕನ್ನಡ ದುನಿಯಾ       Mobile App
       

Kannada Duniya

ಕರುಣಾನಿಧಿಯವರ ಅಂತಿಮ ದರ್ಶನಕ್ಕೆ ನೂಕು ನುಗ್ಗಲು

ಮಂಗಳವಾರದಂದು ವಿಧಿವಶರಾದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿಯವರ ಅಂತಿಮ ದರ್ಶನಕ್ಕೆ ಚೆನ್ನೈನ ರಾಜಾಜಿ ಹಾಲ್ ನಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಈ ಸಂದರ್ಭದಲ್ಲಿ ಅಭಿಮಾನಿಗಳು ಬ್ಯಾರಿಕೇಡ್ ಬೀಳಿಸಿ ಒಳ ನುಗ್ಗಿದ ಕಾರಣ ಸ್ಥಳದಲ್ಲಿ ನೂಕುನುಗ್ಗಲು ಉಂಟಾಗಿದೆ.

ಅಪಾರ ಸಂಖ್ಯೆಯಲ್ಲಿ ಒಳ ನುಗ್ಗುತ್ತಿರುವ ಜನಜಂಗುಳಿಯನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಕರುಣಾನಿಧಿ ಅವರ ಅಂತಿಮ ದರ್ಶನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಭೇಟಿ ನೀಡುವ ಮಾಹಿತಿ ಇದ್ದರೂ ಪೊಲೀಸರು ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಿಲ್ಲವೆಂಬ ಮಾತುಗಳು ಕೇಳಿಬರುತ್ತಿವೆ.

ಇದರ ಮಧ್ಯೆ ಮರೀನಾ ಬೀಚ್ ನಲ್ಲಿ ಕರುಣಾನಿಧಿಯವರ ಅಂತ್ಯಸಂಸ್ಕಾರಕ್ಕಾಗಿ ಸಕಲ ಸಿದ್ಧತೆಗಳನ್ನು ನಡೆಸಲಾಗುತ್ತಿದ್ದು, ಅಣ್ಣಾದೊರೈ ಅವರ ಸ್ಮಾರಕದಿಂದ 200 ಮೀಟರ್ ಅಂತರದಲ್ಲಿ ಕರುಣಾನಿಧಿ ಅವರ ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...