alex Certify
ಕನ್ನಡ ದುನಿಯಾ       Mobile App
       

Kannada Duniya

ಮರೀನಾ ಬೀಚ್ ನಲ್ಲೇ ಕರುಣಾನಿಧಿ ಅಂತ್ಯಕ್ರಿಯೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಮಂಗಳವಾರದಂದು ವಿಧಿವಶರಾದ ತಮಿಳುನಾಡು ಮಾಜಿ ಮುಖ್ಯಮಂತ್ರಿ, ದ್ರಾವಿಡ ಮುನ್ನೇತ್ರ ಕಳಗಂ ಪಕ್ಷದ ನಾಯಕ ಕರುಣಾನಿಧಿ ಅವರ ಅಂತ್ಯಸಂಸ್ಕಾರ ಜಾಗದ ಕುರಿತಂತೆ ಉಂಟಾಗಿದ್ದ ವಿವಾದ ಕೊನೆಗೂ ಬಗೆಹರಿದಿದೆ.

ಮರೀನಾ ಬೀಚ್ ನಲ್ಲಿ ಅಂತ್ಯ ಸಂಸ್ಕಾರಕ್ಕೆ ಅವಕಾಶ ಕಲ್ಪಿಸಲು ನಿರಾಕರಿಸಿದ್ದ ತಮಿಳುನಾಡಿನ ಎಐಎಡಿಎಂಕೆ ಸರ್ಕಾರ ಮದ್ರಾಸ್ ಹೈಕೋರ್ಟ್ ತೀರ್ಪಿನ ಬಳಿಕ ಅವಕಾಶ ಕಲ್ಪಿಸಲು ಒಪ್ಪಿಗೆ ನೀಡಿದೆ.

ಸರ್ಕಾರ ಈ ಮೊದಲು ಮರೀನಾ ಬೀಚ್ ನಲ್ಲಿ ಅಂತ್ಯ ಸಂಸ್ಕಾರಕ್ಕೆ ಅವಕಾಶ ನಿರಾಕರಿಸಿದ ವೇಳೆ, ಡಿಎಂಕೆ ನಾಯಕರು ಇದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದರ ವಿಚಾರಣೆ ಇಂದು ಬೆಳಿಗ್ಗೆ ನಡೆದಿದ್ದು, ಮರೀನಾ ಬೀಚ್ ನಲ್ಲಿ ರಾಜಕೀಯ ನಾಯಕರ ಅಂತ್ಯ ಸಂಸ್ಕಾರ ಪ್ರಶ್ನಿಸಿ ಈ ಹಿಂದೆ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಅರ್ಜಿದಾರರು ಹಿಂಪಡೆದುಕೊಂಡಿದ್ದರು.

ಆದರೆ ತಮಿಳುನಾಡು ಸರ್ಕಾರ ಕೊನೆ ಕ್ಷಣದವರೆಗೂ ಮರೀನಾ ಬೀಚ್ ನಲ್ಲಿ ಕರುಣಾನಿಧಿಯವರ ಅಂತ್ಯ ಸಂಸ್ಕಾರಕ್ಕೆ ಅವಕಾಶ ನೀಡುವುದಿಲ್ಲವೆಂದು ಪಟ್ಟು ಹಿಡಿದಿತ್ತು. ಅಂತಿಮವಾಗಿ ನ್ಯಾಯಾಲಯ, ಮರೀನಾ ಬೀಚ್ ನಲ್ಲಿ ಅಂತ್ಯ ಸಂಸ್ಕಾರಕ್ಕೆ ಅನುವು ಮಾಡಿಕೊಟ್ಟಿದ್ದು, ಇದಕ್ಕೆ ಈಗ ತಮಿಳುನಾಡು ಸರ್ಕಾರವೂ ಒಪ್ಪಿಗೆ ನೀಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...