alex Certify
ಕನ್ನಡ ದುನಿಯಾ       Mobile App
       

Kannada Duniya

ಆಸ್ಪತ್ರೆ ಮುಂದಿನಿಂದ ಕದಲುತ್ತಿಲ್ಲ ಕರುಣಾನಿಧಿ ಅಭಿಮಾನಿಗಳು

ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದಕ್ಕೂ ಮೊದಲು ಗೋಪಾಲಪುರಂನಲ್ಲಿರುವ ತಮ್ಮ ನಿವಾಸದಲ್ಲಿಯೇ ತಜ್ಞ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದ ಕರುಣಾನಿಧಿಯವರನ್ನು ಅವರ ಆರೋಗ್ಯ ಸ್ಥಿತಿ ಕ್ಷೀಣಿಸಿದ ಹಿನ್ನೆಲೆಯಲ್ಲಿ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದಾದ ಬಳಿಕ ಕರುಣಾನಿಧಿ ಅವರ ಆರೋಗ್ಯ ಸ್ಥಿತಿ ಕುರಿತು ಹಲವು ವದಂತಿಗಳು ಹರಿದಾಡುತ್ತಿದ್ದು, ಇದರಿಂದ ಆತಂಕಗೊಂಡಿರುವ ಡಿಎಂಕೆ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಕಾವೇರಿ ಆಸ್ಪತ್ರೆಯ ಮುಂದೆ ಜಮಾಯಿಸಿದ್ದಾರೆ.

ಕಳೆದ ರಾತ್ರಿ ಕಾವೇರಿ ಆಸ್ಪತ್ರೆ ವತಿಯಿಂದ ಕರುಣಾನಿಧಿಯವರ ಆರೋಗ್ಯ ಸ್ಥಿತಿ ಕುರಿತಂತೆ ಹೆಲ್ತ್ ಬುಲೆಟಿನ್ ಹೊರಡಿಸಿದ್ದು, ಇದರಲ್ಲಿ ಕರುಣಾನಿಧಿಯವರ ಆರೋಗ್ಯ ಸ್ಥಿರವಾಗಿದೆ. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ತಿಳಿಸಲಾಗಿದೆ.

ಇಷ್ಟಾದರೂ ಪಕ್ಷದ ಕಾರ್ಯಕರ್ತರ ಹಾಗೂ ಅಭಿಮಾನಿಗಳ ಆತಂಕ ಕಡಿಮೆಯಾಗಿಲ್ಲ. ಮನೆಗೆ ತೆರಳುವಂತೆ ಸೂಚಿಸಿದರೂ ಆಸ್ಪತ್ರೆ ಮುಂದಿನಿಂದ ಕದಲುತ್ತಿಲ್ಲ. ಈ ಹಿನ್ನೆಲೆಯಲ್ಲಿ ಆಸ್ಪತ್ರೆ ಸುತ್ತಮುತ್ತ ಭಾರೀ ಬಂದೋಬಸ್ತ್ ಏರ್ಪಡಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...