alex Certify
ಕನ್ನಡ ದುನಿಯಾ       Mobile App
       

Kannada Duniya

ಕರುಣಾನಿಧಿಯವರ ಅಂತಿಮ ದರ್ಶನಕ್ಕೆ ಪ್ರಧಾನಿ ಮೋದಿ

ಇಂದು ಸಂಜೆ ವಿಧಿವಶರಾದ ತಮಿಳುನಾಡು ಮಾಜಿ ಮುಖ್ಯಮಂತ್ರಿ, ದ್ರಾವಿಡ ಮುನ್ನೇತ್ರ ಕಳಗಂ ನಾಯಕ ಎಂ. ಕರುಣಾನಿಧಿ ಅವರ ಅಂತಿಮ ಸಂಸ್ಕಾರ ನಾಳೆ ಸಂಜೆ ಚೆನ್ನೈನ ಮರೀನಾ ಬೀಚ್ ನಲ್ಲಿ ನೆರವೇರಲಿದೆ.

ತಮ್ಮ ನೆಚ್ಚಿನ ನಾಯಕನನ್ನು ಕಳೆದುಕೊಂಡ ಡಿಎಂಕೆ ಕಾರ್ಯಕರ್ತರು ಶೋಕಸಾಗರದಲ್ಲಿ ಮುಳುಗಿದ್ದು, ತಮಿಳುನಾಡಿನಾದ್ಯಂತ ಶೋಕದ ಛಾಯೆ ಆವರಿಸಿದೆ.

ಕರುಣಾನಿಧಿ ಅವರ ಅಂತಿಮ ದರ್ಶನಕ್ಕಾಗಿ ಚೆನ್ನೈನ ರಾಜಾಜಿ ಹಾಲ್ ನಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಇದಕ್ಕಾಗಿ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ.

ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ದೇಶದ ಪ್ರಮುಖ ರಾಜಕೀಯ ನೇತಾರರು ಅಂತಿಮ ದರ್ಶನ ಪಡೆಯಲು ಚೆನ್ನೈಗೆ ಆಗಮಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...