alex Certify
ಕನ್ನಡ ದುನಿಯಾ       Mobile App
       

Kannada Duniya

ನಾಳೆ ಚೆನ್ನೈನ ಮರೀನಾ ಬೀಚ್ ನಲ್ಲಿ ಕರುಣಾನಿಧಿ ಅಂತ್ಯಕ್ರಿಯೆ

ಇಂದು ಸಂಜೆ ವಿಧಿವಶರಾದ ತಮಿಳುನಾಡು ಮಾಜಿ ಮುಖ್ಯಮಂತ್ರಿ, ಡಿಎಂಕೆ ನಾಯಕ ಎಂ. ಕರುಣಾನಿಧಿಯವರ ಅಂತ್ಯಕ್ರಿಯೆ ಚೆನ್ನೈನ ಮರೀನಾ ಬೀಚ್ ನಲ್ಲಿ ನೆರವೇರಿಸಲಾಗುವುದು ಎಂದು ತಿಳಿದುಬಂದಿದೆ.

ಕಳೆದ 12 ದಿನಗಳಿಂದ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕರುಣಾನಿಧಿ ಅವರ ಆರೋಗ್ಯ ಪರಿಸ್ಥಿತಿ ಬಿಗಡಾಯಿಸುತ್ತಿದ್ದಂತೆಯೇ ಕಾವೇರಿ ಆಸ್ಪತ್ರೆ ವೈದ್ಯರು, ಮುಂದಿನ 24 ಗಂಟೆಗಳು ನಿರ್ಣಾಯಕವೆಂದು ಹೇಳಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಕರುಣಾನಿಧಿ ಇಹಲೋಕ ತ್ಯಜಿಸಿದ್ದಾರೆ.

ಕರುಣಾನಿಧಿಯವರ ಅಂತ್ಯಕ್ರಿಯೆಯನ್ನು ಮರೀನಾ ಬೀಚ್ ನಲ್ಲಿ ನೆರವೇರಿಸಲಾಗುವುದು ಎಂದು ತಿಳಿದು ಬಂದಿದ್ದು, ಅದಕ್ಕೂ ಮುನ್ನ ಸಾರ್ವಜನಿಕರ ದರ್ಶನಕ್ಕಾಗಿ ಪಾರ್ಥಿವ ಶರೀರವನ್ನು ಇರಿಸಲಾಗುವುದು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...