alex Certify
ಕನ್ನಡ ದುನಿಯಾ       Mobile App
       

Kannada Duniya

ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಇನ್ನಿಲ್ಲ

ವಯೋ ಸಹಜ ಸಮಸ್ಯೆಗಳ ಕಾರಣಕ್ಕೆ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ, ಡಿಎಂಕೆ ನಾಯಕ ಎಂ. ಕರುಣಾನಿಧಿ ಇಂದು ನಿಧನರಾಗಿದ್ದಾರೆ.

ಅನಾರೋಗ್ಯದ ಹಿನ್ನೆಲೆಯಲ್ಲಿ 94 ವರ್ಷದ ಕರುಣಾನಿಧಿಯವರಿಗೆ ಕಾವೇರಿ ಆಸ್ಪತ್ರೆಯ ತಜ್ಞ ವೈದ್ಯರ ತಂಡ ಚೆನ್ನೈನ ಗೋಪಾಲಪುರಂನಲ್ಲಿರುವ ಅವರ ಮನೆಯಲ್ಲಿಯೇ ಚಿಕಿತ್ಸೆ ನೀಡುತ್ತಿದ್ದು, ಆರೋಗ್ಯ ಪರಿಸ್ಥಿತಿ ಬಿಗಡಾಯಿಸಿದ ಕಾರಣಕ್ಕೆ ಅವರನ್ನು ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಅವರ ಆರೋಗ್ಯ ಸ್ಥಿತಿ ಕ್ಷೀಣಿಸುತ್ತಿದ್ದಂತೆಯೇ ಪತ್ನಿ ರಜತಿಯಮ್ಮಾಳ್ ಸೇರಿದಂತೆ ಕುಟುಂಬ ಸದಸ್ಯರು ಆಸ್ಪತ್ರೆಗೆ ಧಾವಿಸಿದ್ದರು.

ಕರುಣಾನಿಧಿಯವರ ಆರೋಗ್ಯ ಸ್ಥಿತಿ ಗಂಭೀರವಾಗಿರುವ ಕುರಿತು ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆಯೇ ಡಿಎಂಕೆ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಆಸ್ಪತ್ರೆ ಬಳಿ ಭಾರೀ ಸಂಖ್ಯೆಯಲ್ಲಿ ನೆರೆದಿದ್ದರು. ಆಸ್ಪತ್ರೆ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ವೈದ್ಯರು ಕರುಣಾನಿಧಿಯವರ ನಿಧನದ ಸುದ್ದಿಯನ್ನು ಘೋಷಿಸುತ್ತಿದ್ದಂತೆಯೇ ಪಕ್ಷದ ಕಾರ್ಯಕರ್ತರ ದುಃಖದ ಕಟ್ಟೆಯೊಡೆದಿದೆ. ಕರುಣಾನಿಧಿಯವರ ನಿಧನದಿಂದ ಡಿಎಂಕೆ ಕಾರ್ಯಕರ್ತರಲ್ಲಿ ಶೋಕ ಮಡುಗಟ್ಟಿದ್ದು, ಅಗಲಿದ ನಾಯಕನಿಗೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ.

13 ಬಾರಿ ತಮಿಳುನಾಡು ವಿಧಾನಸಭೆಗೆ ಆಯ್ಕೆಯಾಗಿದ್ದ ಕರುಣಾನಿಧಿ, 5 ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ನಿರ್ವಹಿಸಿದ್ದರು. ಆರೋಗ್ಯ ಸಮಸ್ಯೆ ತಲೆದೋರಿದ ಬಳಿಕ ತಮ್ಮ ಪುತ್ರ ಎಂ.ಕೆ. ಸ್ಟಾಲಿನ್ ರನ್ನು ಉತ್ತರಾಧಿಕಾರಿಯೆಂದು ಕರುಣಾನಿಧಿ ಘೋಷಿಸಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...