alex Certify
ಕನ್ನಡ ದುನಿಯಾ       Mobile App
       

Kannada Duniya

ತೆಲಂಗಾಣ ವಿಧಾನಸಭೆ ವಿಸರ್ಜನೆಗೆ ರಾಜ್ಯಪಾಲರ ಅಸ್ತು

ಅವಧಿಗೂ ಮುನ್ನವೇ ತೆಲಂಗಾಣ ವಿಧಾನಸಭೆ ವಿಸರ್ಜನೆಯಾಗೋದು ಖಚಿತವಾಗಿದೆ. ಸರ್ಕಾರ ವಿಸರ್ಜನೆಗೆ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಶಿಫಾರಸ್ಸು ಮಾಡಿದ್ದಾರೆ. ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ರಾಜ್ಯಪಾಲರನ್ನು ಭೇಟಿ ಮಾಡಿ ಕೆ. ಚಂದ್ರಶೇಖರ್ ರಾವ್ ಈ ಬಗ್ಗೆ ಚರ್ಚೆ ನಡೆಸಿದ್ದಾರೆ. ಚಂದ್ರಶೇಖರ್ ರಾವ್ ಶಿಫಾರಸ್ಸಿಗೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ.

ಕ್ಯಾಬಿನೆಟ್ ಸಭೆಗೂ ಮುನ್ನ ಸಿಎಂ, ಪಕ್ಷದ ಸಂಸದರು ಹಾಗೂ ಶಾಸಕರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಚಂದ್ರಶೇಖರ್ ರಾವ್ ವಿಧಾನಸಭೆ ವಿಸರ್ಜನೆ ಮಾಡಲಿದ್ದಾರೆಂಬ ಬಗ್ಗೆ ಮುನ್ಸೂಚನೆ ಸಿಕ್ಕಿತ್ತು. ಸಮಯಕ್ಕೆ ಕಾಯುತ್ತಿದ್ದರು ಎನ್ನಲಾಗಿದೆ. ಸೆಪ್ಟೆಂಬರ್ 6 ಶುಭವೆಂದು ಪರಿಗಣಿಸಿರುವ ಅವ್ರು ಈ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ.

ಬೆಳಿಗ್ಗೆ ನಡೆದ ಸಭೆಯಲ್ಲಿ ಸಚಿವ ಸಂಪುಟದ ಸದಸ್ಯರು ಸರ್ಕಾರ ವಿಸರ್ಜನೆಗೆ ಒಪ್ಪಿಗೆ ನೀಡಿದ್ದರು. ನಂತ್ರ ಮುಖ್ಯಮಂತ್ರಿಗಳು ರಾಜ್ಯಪಾಲರನ್ನು ಭೇಟಿ ಮಾಡಿದ್ದರು ಎನ್ನಲಾಗಿದೆ. ಸರ್ಕಾರ ವಿಸರ್ಜನೆ ನಿರ್ಧಾರವನ್ನು ಪಕ್ಷದ ಸದಸ್ಯರನ್ನು ಹೊರತುಪಡಿಸಿ ಯಾರಿಗೂ ಪ್ರಶ್ನಿಸುವ ಹಕ್ಕಿಲ್ಲವೆಂದು ಟಿ.ಆರ್.ಎಸ್. ಮುಖಂಡರೊಬ್ಬರು ಹೇಳಿದ್ದಾರೆ. ಸರ್ಕಾರ ಉತ್ತಮ ಆಡಳಿತ ನಡೆಸಿದ್ದು, ಮುಂದಿನ ಬಾರಿ ಗೆಲುವು ನಮ್ಮದೆ ಎಂದು ಅವ್ರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...